LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ: ಸುರ್ಜೇವಾಲ



ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ. ಶಾಸಕರ ಜತೆಗಿನ ಮುಖಾಮುಖಿ ಸಭೆಯಲ್ಲೂ ಈ ವಿಚಾರ ಚರ್ಚೆಯಾಗುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕರೊಂದಿಗಿನ ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತು ಆಡಳಿತ ಕುರಿತ ವೈಯಕ್ತಿಕ ಅಭಿಪ್ರಾಯವನ್ನಷ್ಟೇ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.



ಕಳೆದೆರಡು ದಿನಗಳಲ್ಲಿ ಮೈಸೂರು ಮತ್ತು ಬೆಂಗಳೂರು ವಿಭಾಗದ ಶಾಸಕರ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಮುಂದಿನ ಸೋಮವಾರದಿಂದ ಇತರ ಭಾಗದ ಶಾಸಕರನ್ನು ಕರೆದು ಮಾತನಾಡುತ್ತೇನೆ. ನಂತರದಲ್ಲಿ ಸಂಸದರು, ಮಾಜಿ ಸಂಸದರನ್ನು ಭೇಟಿ ಮಾಡಲಾಗುವುದು. ಈ ಸಭೆಗಳಲ್ಲಿ ಕಳೆದೆರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಶಾಸಕರಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಜಿಲ್ಲಾ ಮತ್ತು ಬ್ಲಾಕ್‌ ಕಾಂಗ್ರೆಸ್‌ ಸೇರಿ ಇತರ ವಿಭಾಗಗಳ ಚಟುವಟಿಕೆ ಕುರಿತು ಮಾಹಿತಿ ಪಡೆಯಲಾಗುವುದು ಎಂದರು.


ಬಹಿರಂಗ ಹೇಳಿಕೆ ಸರಿಯಲ್ಲ




ಸರ್ಕಾರದ ಕುರಿತು ಶಾಸಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರೇ ಆಗಲಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ಎಷ್ಟೇ ಅಸಮಾಧಾನವಿದ್ದರೂ ಅದನ್ನು ಬಹಿರಂಗಪಡಿಸಲು ವೇದಿಕೆಯಿದೆ. ಬಹಿರಂಗವಾಗಿ ಮಾತನಾಡಲು ಅವಕಾಶವಿಲ್ಲ. ನನ್ನೊಂದಿಗೆ ಶಾಸಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎಂದರು.



ಮುಖಾಮುಖಿ ಸಭೆಯಲ್ಲಿ ಶಾಸಕರ ರಿಪೋರ್ಟ್‌ ಕಾರ್ಡ್‌ ಪಡೆಯುತ್ತಿದ್ದೇನೆ. ಶಾಸಕರ ಆಕಾಂಕ್ಷೆಗಳು, ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಅದನ್ನು ರಾಜ್ಯ ಸರ್ಕಾರದ ಗಮನಕ್ಕೂ ತರುತ್ತೇನೆ. ಪಂಚ ಗ್ಯಾರಂಟಿಗಳ ಅನುಷ್ಠಾನದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇನ್ನೂ ಐದಾರು ದಿನ ಇಲ್ಲೇ ಇರುತ್ತೇನೆ. ಎಲ್ಲ ಶಾಸಕರು, ಸಂಸದರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ