LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ, ಡಿಸಿಎಂ, ವಿರೋಧ ಪಕ್ಷದ ನಾಯಕರುಗಳ ಭೇಟಿ - ಜೂ. 13 ರಂದು ಪ್ರೆಸ್‌ಕ್ಲಬ್‌ ನಲ್ಲಿ ಮಾಧ್ಯಮ ಸಂವಾದ

ಜಿಎನ್‌ಆರ್‌ ಕಲ್ಯಾಣ ಮಂಟಪದಲ್ಲಿ ಟಿಟಿಡಿ ಸದಸ್ಯ ಎಸ್‌ ನರೇಶ್‌ ಕುಮಾರ್‌ ಅವರಿಂದ  ಶ್ರೀನಿವಾಸ ಕಲ್ಯಾಣೋತ್ಸವ

ಬೆಂಗಳೂರು ಜೂನ್‌ 10 : ಟಿಟಿಡಿ ಅಧ್ಯಕ್ಷರಾದ ಬಿ.ಆರ್‌ ನಾಯ್ಡು ಅವರು ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳುಉಪಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರುಗಳನ್ನು ಭೇಟಿ ಮಾಡಲಿದ್ದಾರೆ ಎಂದು ಟಿಟಿಡಿ ಸದಸ್ಯರಾದ ಎಸ್‌ ನರೇಶ್‌ ಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರುಟಿಟಿಡಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಬೆಂಗಳೂರು ನಗರಕ್ಕೆ ಶ್ರೀ ಬಿ ಆರ್‌ ನಾಯ್ಡು ಅವರು ಆಗಮಿಸುತ್ತಿದ್ದಾರೆ. ಈ ಪ್ರವಾಸದ ಸಂಧರ್ಭದಲ್ಲಿ ಹೊಸ ಟಿಟಿಡಿ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ನಂತರ ಟಿಟಿಡಿ ಸದಸ್ಯರಲ್ಲಿ ಮೊದಲ ಬಾರಿಗೆ ನರೇಶ್‌ ಕುಮಾರ್‌ ಅವರು ಜಿಎನ್‌ಆರ್‌ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಾಗೆಯೇಮಲ್ಲೇಶ್ವರಂ ವೈಯಾಲಿಕಾವಲ್‌ ನಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಕರ್ನಾಟಕ ರಾಜ್ಯದಿಂದ ಅದರಲ್ಲೂ ಬೆಂಗಳೂರು ನಗರದಿಂದ ಅತಿಹೆಚ್ಚು ಭಕ್ತಾದಿಗಳು ತಿರುಪತಿ-ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ರಾಜ್ಯದ  ಭಕ್ತಾದಿಗಳಿಗೆ ಇನ್ನಷ್ಟು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಆಗಬೇಕಾಗಿರುವಂತಹ ಕಾರ್ಯಗಳ ಬಗ್ಗೆ ಚರ್ಚೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಟಿಟಿಡಿ ಅಧ್ಯಕ್ಷರು ಭೇಟಿ ಮಾಡಿ ಚರ್ಚಿಸಲಿದ್ದಾರೆ.



ಹಾಗೆಯೇಮಾಜಿ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರ ಸ್ವಾಮಿಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಸೇರಿದಂತೆ ವಿರೋಧಪಕ್ಷಗಳ ನಾಯಕರನ್ನೂ ಭೇಟಿಯಾಗಲಿದ್ದಾರೆ ಎಂದು ಎಸ್‌ ನರೇಶ್‌ ಕುಮಾರ್‌ ತಿಳಿಸಿದ್ದಾರೆ.

ಸ್ಟಾರ್ಟ್‌ಅಪ್‌ ಕಂಪನಿಗಳ ಪ್ರತಿನಿಧಿಗಳು ಹಾಗೂ ಭಕ್ತಾದಿಗಳೊಂದಿಗೆ ಸಭೆ:

ಬೆಂಗಳೂರು ನಗರದ ಸ್ಟಾರ್ಟ್‌ಅಪ್‌ ಕಂಪನಿಗಳ ಪ್ರತಿನಿಧಿಗಳೊಂದಿಗೆ ಟಿಟಿಡಿ ಅಧ್ಯಕರಾದ ಬಿ ಆರ್‌ ನಾಯ್ಡು ಅವರು ಸಭೆಯನ್ನು ನಡೆಸಲಿದ್ದಾರೆ. ಇಂದಿನ ಪೀಳಿಗೆಯ ಉದ್ಯಮಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ದಾನದ ಮಹತ್ವ ತಿಳಿಸುವ ನಿಟ್ಟಿನಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ. ಇದಲ್ಲದೇ ಅಧ್ಯಕ್ಷರು ರಾಜ್ಯದ ಪ್ರಮುಖ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ರಾಜ್ಯದ ಭಕ್ತಾದಿಗಳೊಂದಿಗೆ ಸಭೆ ನಡೆಸಲಿದ್ದುತಿರುಪತಿ - ತಿರುಮಲ ದೇವಸ್ಥಾನದಲ್ಲಿನ ಸೌಲಭ್ಯಗಳುಕುಂದುಕೊರತೆಗಳ ಬಗ್ಗೆ ಸಲಹೆ ಮತ್ತು ಸೂಚನೆಗಳನ್ನು ಪಡೆದುಕೊಳ್ಳಲಿದ್ದಾರೆ ಎಂದು ಟಿಟಿಡಿ ಸದಸ್ಯರಾದ ಎಸ್‌ ನರೇಶ್‌ ಕುಮಾರ್‌ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ