LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025 - ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಕುರಿತಾಗಿ ವರದಿ ಸಲ್ಲಿಸಲು ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ.


ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದ್ದು,  ಸದರಿ ಆಯೋಗವು,  2025ನೇ ಮಾರ್ಚ್ ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ಪರಿಶಿಷ್ಟ ಜಾತಿ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ಏಪ್ರಿಲ್  05 ರಿಂದ ಕೈಗೊಳ್ಳಲಾಗುತ್ತಿದೆ.


ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ - 2025 ರನ್ನು  2025 ನೇ ಜೂನ್ 08 ರವರೆಗೆ ವಿಶೇಷ ಶಿಬಿರಗಳು ಹಾಗೂ online ನಲ್ಲಿ ಸ್ವಯಂ ಘೋಷಣೆಗಳನ್ನು ಒಳಗೊಂಡಂತೆ ಒಟ್ಟು 2 ವಿಧಾನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.


ಈಗಾಗಲೇ 2025ನೇ ಜೂನ್ 06 ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90.00 ರಷ್ಟು ಪ್ರಗತಿಯನ್ನು ಸಾಧಿಸಲಾಗಿರುತ್ತದೆ.  ಉಳಿದಂತೆ ಸುಮಾರು ಶೇ. 10 ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿರುತ್ತದೆ.


ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ.


ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು 2025 ಜೂನ್ ರಿಂದ ರಾಜ್ಯದಲ್ಲಿನ ಒಟ್ಟು 9400 ನಾಗರೀಕ ಸೇವಾ ಕೇಂದ್ರಗಳಾದ, "ಕರ್ನಾಟಕ ಒನ್" (Karnataka one) 'ಬೆಂಗಳೂರು ಒನ್" (Bengaluru one) " " (Grama one)  ಹಾಗೂ 198  ಬಿ.ಬಿ.ಎಂ. ಪಿ ವಾರ್ಡ್ ಕಚೇರಿ" (BBMP ward offices) ಗಳಿಗೆ ಭೇಟಿ ನೀಡಿ 2025ನೇ ಜೂನ್ 22 ರವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.


ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ.
ಮುಂದುವರೆದು, online ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration  ಲಿಂಕ್ ಮೂಲಕ  2025ನೇ ಜೂನ್ 22 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ