LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಾಣಕ್ಯಪುರಿಯಲ್ಲಿ ಕಾಂಗ್ರೆಸ್ ಸಂಸದೆ ಸುಧಾ ರಾಮಕೃಷ್ಣನ್ ಚೈನ್ ಕದಿಯಲ್ಪಟ್ಟ ಘಟನೆ: ಭದ್ರತೆ ಬಗ್ಗೆ ಪ್ರಶ್ನೆ

ನವದೆಹಲಿ: ರಾಷ್ಟ್ರೀಯ ರಾಜಧಾನಿ ನವದಿಲ್ಲಿಯಲ್ಲಿ ಭದ್ರತಾ ವಲಯವಾದ ಚಾಣಕ್ಯಪುರಿಯಲ್ಲಿ Congress ಸಂಸದೆ ಸುಧಾ ರಾಮಕೃಷ್ಣನ್ (MP Sudha Ramakrishnan) ಅವರ ಚಿನ್ನದ ಚೈನ್ ಕದಿಯಲ್ಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ದೇಶದ ಮಹಿಳಾ ಭದ್ರತೆ ಕುರಿತು ಗಂಭೀರ ಚಿಂತನೆಗೆ ಕಾರಣವಾಗಿದೆ.


ತಮಿಳುನಾಡಿನ ಮೈಲಾಡುತುರೈ ಕ್ಷೇತ್ರದ ಸಂಸದೆ ಸುಧಾ ರಾಮಕೃಷ್ಣನ್ ಅವರು, ಡಿಎಂಕೆ ಶಾಸಕಿ ರಾಜತಿ ಅವರೊಂದಿಗೆ ಬೆಳಗ್ಗೆ 6:15ರ ಸುಮಾರಿಗೆ ಚಾಣಕ್ಯಪುರಿಯ ಪೋಲೆಂಡ್ ರಾಯಭಾರ ಕಚೇರಿ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಹೆಲ್ಮೆಟ್ ಧರಿಸಿದ ವ್ಯಕ್ತಿ ಸ್ಕೂಟರ್‌ನಲ್ಲಿ ಬಂದು ಅವರ ಚಿನ್ನದ ಚೈನ್ ಕಿತ್ತು ಪರಾರಿಯಾಗಿದ್ದಾನೆ.


ಅವರ ಹೇಳಿಕೆಯಲ್ಲಿ, ಕಳ್ಳ ನಿದಾನವಾಗಿ ಎದುರಿನಿಂದ ಬರುತ್ತಿದ್ದ. ಆತ ಚೈನ್ ಕಳ್ಳ ಎಂಬ ಅನುಮಾನ ಬರಲಿಲ್ಲ. ಚೈನ್ ಎಳೆದ ವೇಳೆ, ಅವರ ಕುತ್ತಿಗೆಗೆ ಗಾಯಗಳು ಆಗಿದ್ದು, ಬಟ್ಟೆ ಕೂಡ ಹರಿದಿದೆ ಎಂದು ತಿಳಿಸಿದ್ದಾರೆ. ಸಹಾಯಕ್ಕಾಗಿ ಕೂಗಿದ ಬಳಿಕ, ದೆಹಲಿ ಪೊಲೀಸರ ಗಸ್ತು ವಾಹನಕ್ಕೆ ದೂರು ನೀಡಿದ್ದಾರೆ.


ಸುಧಾ ರಾಮಕೃಷ್ಣನ್ ಅವರು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರೀಯ ರಾಜಧಾನಿಯ ಅತ್ಯಂತ ಭದ್ರ ಪ್ರದೇಶದಲ್ಲೂ ಮಹಿಳೆಯರು ಸುರಕ್ಷಿತವಾಗಿ ನಡೆಯಲು ಸಾಧ್ಯವಿಲ್ಲದ ಸ್ಥಿತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


“ರಾಜಧಾನಿಯಲ್ಲಿ ಸಂಸದೆ ಸ್ವತಃ ಅದೆಷ್ಟು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂದರೆ ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬಹುದು?” ಎಂದು ಅವರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ