LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ ಮತ್ತು ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿಯಲ್ಲಿ ಅಭಿವೃದ್ಧಿ : ಸಿದ್ದರಾಮಯ್ಯ

ವಯಸ್ಕರೂ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 "ಎ-ಗುಂ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ ಎನ್‍ಒಸಿ ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ:

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿರುತ್ತದೆ.

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ