LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಂಜನಗೂಡು ತಾಲ್ಲೂಕು ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಆರಂಭಿಸಲು ಕ್ರಮ : ದಿನೇಶ್ ಗುಂಡೂರಾವ್


ಬೆಂಗಳೂರು, ಆಗಸ್ಟ್ 18, (ಕರ್ನಾಟಕ ವಾರ್ತೆ) : ನಂಜನಗೂಡು  ತಾಲ್ಲೂಕು ಆಸ್ಪತ್ರೆಯಲ್ಲಿ ಟ್ರಮಾ ಕೇರ್ ಸೇವೆಗಳನ್ನು ಆರಂಭಿಸುವ ಉದ್ದೇಶವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು


ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಾ. ಯತೀಂದ್ರ ಎಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ  ಆಸ್ಪತ್ರೆಗಳನ್ನು ರಾಷ್ಟ್ರೀಯ ಅಪಘಾತ ಮತ್ತು ಸುಟ್ಟಗಾಯಗಳ ಕಾರ್ಯಕ್ರಮದಡಿಯಲ್ಲಿ ಬಲಗೊಳಿಸಲು ರೂ. 10.00 ಕೋಟಿಗಳ ಕ್ರಿಯಾ ಯೋಜನೆಗೆ ಅನುಮೋದನ ನೀಡಲಾಗಿದೆ.


ದಿನಾಂಕ:  19.03.2025 ರಂದು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುತ್ತದೆ. ಇದರಲ್ಲಿ ನಂಜನಗೂಡು ತಾಲ್ಲೂಕು ಆಸ್ಪತ್ರೆಗೆ ಅಗತ್ಯವಿರುವ ಉಪಕರಣಗಳನ್ನು ಸಹ ಪ್ರಸ್ತಾಪಿಸಲಾಗಿದೆ.  ಕೇಂದ್ರ ಸರ್ಕಾರದ ರಾಷ್ಟ್ರೀಯ ಅಪಘಾತ ಮತ್ತು ಸುಟ್ಟ ಗಾಯಗಳ ತಡೆಗಟ್ಟುವಿಕೆ ಮತ್ತು ನಿರ್ವಹಣಾ ಕಾರ್ಯಕ್ರಮದ ಮಾರ್ಗಸೂಚಿಯನ್ವಯ - ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿನ ತುರ್ತು ಚಿಕಿತ್ಸಾ  ವಿಭಾಗವನ್ನು ಮೇಲ್ದರ್ಜೆಗೇರಿಸಿ ಅಪಘಾತಕ್ಕೆ ಒಳಗಾದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು ಹಾಗೂ ಅವಶ್ಯಕವಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆಯ ಆಸ್ಪತ್ರೆಗಳಿಗೆ ತುರ್ತು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿರುತ್ತದೆ ಪ್ರತ್ಯೇಕ ಟ್ರಾಮಾ ಕೇರ್ ಸೆಂಟರ್‌ಗಳನ್ನು ಕಲ್ಪಿಸಬೇಕೆಂಬ ನಿಯಮವು ಮಾರ್ಗಸೂಚಿಯಲ್ಲಿ ಇಲ್ಲದಿರುವುದರಿಂದ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲು ಜಾಗದ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ