LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಹಿತ ಕಾಪಡಲು ನಾವು ಬದ್ದ : ಭೂಮಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಲು ಅಗತ್ಯ ಕ್ರಮ – ಡಿ.ಕೆ. ಶಿವಕುಮಾರ್

ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ) : ರೈತರ ಹಿತ ಕಾಪಾಡಲು ನಾವು ಸದಾ ಬದ್ದರಾಗಿದ್ದೇವೆ. ನಾಡಪ್ರಭು ಕೆಂಪೇಗೌಡ ಬಡಾವಣೆ ನಿಮಾ‍ರ್ಣಕ್ಕಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.


ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ಬಿ.ಡಿ.ಎ ಕಾಯ್ದೆ 1976 ಕಲಂ 17(1) ಮತ್ತು (3) ರಡಿ ದಿನಾಂಕ: 21-05-2008 ರಂದು ಒಟ್ಟು 4814 ಎಕರೆ 15 ಗುಂಟೆ ವಿಸ್ತೀರ್ಣದ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳು ಪ್ರಥಮಿಕ ಅಧಿಸೂಚನೆ ಹೊರಡಿಸಲಾಗಿದೆ.


ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಕಾಯ್ದೆ ಕಲಂ 19 (1)ರಡಿಯಲ್ಲಿ ದಿನಾಂಕ: 18-02-2010 ರಂದು 4043 ಎಕರೆ 27 ಗುಂಟೆ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಅಂತಿಮಗೊಳಿಸಿ ಇಂಜಿನಿಯರಿಂಗ್ ವಿಭಾಗಕ್ಕೆ ಹಸ್ತಾಂತರಿಸಿದ ಜಮೀನಿನ ವಿಸ್ತೀರ್ಣ 2806 ಎಕರೆ 08 ಗುಂಟೆ, ಇದರಲ್ಲಿ ಒಟ್ಟು 30296 ನಿವೇಶನಗಳನ್ನು ರಚಿಸಲಾಗಿದ್ದು, 22481 ನಿವೇಶನಗಳನ್ನು ಹಂಚಿಕೆ / ಹರಾಜು ಮಾಡಲಾಗಿದೆ.


ಡಾ. ಕೆ. ಶಿವರಾಮಕಾರಂತ ಬಡಾವಣೆ ರಚನೆಗಾಗಿ ದಿನಾಂಕ: 30-12-2008ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿ ದಿನಾಂಕ:  30-10-2018 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಡಾ. ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಸಂಪರ್ಕವನ್ನು ಸುಧಾರಿಸಲು ಆರ್.ಎಂ.ಪಿ 2015 ರಸ್ತೆ ಮತ್ತು ಬೈಪಾಸ್ ರಸ್ತೆ ಗಾಗಿ ದಿನಾಂಕ: 18-02-2022 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ದಿನಾಂಕ: 06-08-2022ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಥಮಿಕ ಮತ್ತು ಅಂತಿಮ ಅಧಿಸೂಚನೆಯಲ್ಲಿ ಬಿಟ್ಟುಹೋದ ಭೂಮಿಯನ್ನು ಬಡಾವಣೆಯೊಳಗೆ ಗುರುತಿಸಲು ದಿನಾಂಕ: 19-08-2022ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದ್ದು, ದಿನಾಂಕ: 18-10-2022 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.  ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅಪೀಲ್ ಸಂ. 252/2017ರಲ್ಲಿ Status quo  ಆದೇಶ ನೀಡಿರುವುದರಿಂದ ನಿವೇಶನಗಳನ್ನು ಹಂಚಿಕೆ ಮಾಡಿರುವುದಿಲ್ಲ ಎಂದು ತಿಳಿಸಿದರು.




Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ