LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಎಸ್‌ಟಿ ನೋಟಿಸ್‌ಗೆ ಗಾಬರಿಯಾಗಬೇಡಿ: ವ್ಯಾಪಾರಿಗಳ ಆತಂಕ ತಳ್ಳಿ ಹಾಕಿದ ತೆರಿಗೆ ಇಲಾಖೆ

ಬೆಂಗಳೂರು: "ಜಿಎಸ್‌ಟಿ ನೋಟಿಸ್ ಪಡೆದವರು ಗಾಬರಿಯಾಗಬೇಡಿ, ನೀವು ನೀಡುವ ಸ್ಪಷ್ಟನೆ ಮೇಲೆ ತೆರಿಗೆ ಹಾಗೂ ದಂಡ ನಿಗದಿಯಾಗುತ್ತದೆ" ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಮೀರಾ ಪಂಡಿತ್ ಅವರು ಹೇಳಿದ್ದಾರೆ. ಮಂಗಳವಾರ ಕೋರಮಂಗಲದಲ್ಲಿನ ತೆರಿಗೆ ಕಚೇರಿಯಲ್ಲಿ ನಡೆದ ‘ಜಿಎಸ್ಟಿ ತಿಳಿಯಿರಿ’ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.


850 ವ್ಯಾಪಾರಿಗಳಿಗೆ ನೋಟಿಸ್ ಜಾರಿ:
ಪ್ರಥಮ ಹಂತದಲ್ಲಿ ಕೋಟ್ಯಂತರ ರೂ. ವಹಿವಾಟು ನಡೆಸಿದ ಸುಮಾರು 850 ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಸಿಗರೇಟು, ಗುಟ್ಕಾ ಉತ್ಪನ್ನಗಳಂತಹ 28% ಜಿಎಸ್‌ಟಿ ಇರುವ ವಸ್ತುಗಳ ಜೊತೆಗೆ, ಹಣ್ಣು, ಹಾಲು, ತರಕಾರಿ ಮುಂತಾದ ವಿನಾಯಿತಿದಾರ ವಸ್ತುಗಳ ವ್ಯಾಪಾರದ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದರು.


ಡೇಟಾ ಆಧಾರದ ಮೇಲೆ ಕ್ರಮ:
2025ರ ಜನವರಿ ತಿಂಗಳ ಪೇಟಿಎಂ ಮತ್ತು ಫೋನ್‌ಪೇ ಡೇಟಾ ಆಧಾರದ ಮೇಲೆ ವ್ಯಾಪಾರಿಗಳನ್ನು ಗುರುತಿಸಿ ನೋಟಿಸ್ ನೀಡಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ರೇರಾ ಮೂಲದಿಂದ ಮಾಹಿತಿ ಸಂಗ್ರಹಿಸಿ ನೋಟಿಸ್ ಜಾರಿಯಾಗಿದೆ


ಜಿಎಸ್‌ಟಿ ಮಿತಿ ಹೆಚ್ಚಿಸುವ ಮನವಿ:
ಸೇವೆಗಾಗಿ 20 ಲಕ್ಷ ರೂ. ಮತ್ತು ವಸ್ತು ಮಾರಾಟಕ್ಕೆ 40 ಲಕ್ಷ ರೂ. ಮಿತಿಯನ್ನು ಕ್ರಮವಾಗಿ 50 ಲಕ್ಷ ಮತ್ತು 1 ಕೋಟಿ ರೂ.ಗೆ ಹೆಚ್ಚಿಸಲು ವ್ಯಾಪಾರಿಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ