LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪುಕೋಟೆ ಧ್ವಜಾರೋಹಣಕ್ಕೆ ಆಯ್ಕೆಯಾಗಿರುವ ಆನೆಗೊಂದಿ ಪಂಚಾಯಿತಿ ಅಧ್ಯಕ್ಷೆ: ಹುಲಿಗೆಮ್ಮ ನಾಯಕ್‌ ರಾಷ್ಟ್ರ ಮಟ್ಟದ ಗೌರವಕ್ಕೆ ಪಾತ್ರ!

ಗಂಗಾವತಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೊಪ್ಪಳ ಜಿಲ್ಲೆಯ ಆನೆಗೊಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್ ಅವರನ್ನು ವಿಶೇಷ ಅತಿಥಿಯಾಗಿ ಆಯ್ಕೆ ಮಾಡಲಾಗಿದೆ.


ರಾಜ್ಯದಿಂದ ಕೇವಲ ಏಳು ಪಂಚಾಯಿತಿ ಅಧ್ಯಕ್ಷರಿಗೆ ಮಾತ್ರ ಈ ಗೌರವ ದೊರೆಯಿದ್ದು, ಕಲ್ಯಾಣ ಕರ್ನಾಟಕದಿಂದ ಇಬ್ಬರು ಮಾತ್ರ ಆಯ್ಕೆಯಾಗಿದ್ದಾರೆ. ಕೊಪ್ಪಳ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಪ್ರತಿನಿಧಿಯಾಗಿರುವುದು ಇಲ್ಲಿ ವಿಶೇಷ.


ಈ ಆಯ್ಕೆ ನರೇಗಾ ಯೋಜನೆಯ ಸಕ್ರೀಯ ಅನುಷ್ಠಾನ, ಘನತ್ಯಾಜ್ಯ ನಿರ್ವಹಣೆಯಲ್ಲಿ ಉತ್ತಮ ನಿರ್ವಹಣೆ, ಮತ್ತು ಆನ್‌ಲೈನ್ ಹಾಜರಾತಿ ವ್ಯವಸ್ಥೆಯ ಯಶಸ್ಸು ಮುಂತಾದ ಮಾನದಂಡಗಳನ್ನು ಆಧರಿಸಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆನೆಗೊಂದಿ ಪಂಚಾಯಿತಿ ರಾಜ್ಯ ಮಟ್ಟದಲ್ಲೂ ಗಮನ ಸೆಳೆದಿದೆ.


ಈ ಹಿಂದೆ ಗಾಂಧಿಗ್ರಾಮ ಪುರಸ್ಕಾರವನ್ನು ಪಡೆದುಕೊಂಡಿರುವ ಆನೆಗೊಂದಿ ಪಂಚಾಯಿತಿ ಈಗ ರಾಷ್ಟ್ರಮಟ್ಟದಲ್ಲಿಯೂ ತನ್ನ ಹೆಸರನ್ನು ದಾಖಲಿಸಿದೆ. "ನಮ್ಮ ಪಂಚಾಯಿತಿ ವಿವಿಧ ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ಈ ಗೌರವ ನಮ್ಮ ಗ್ರಾಮಕ್ಕಾಗಿ, ಜಿಲ್ಲೆಯ ಗರಿಮೆಗೆ ಸಾಧನೆಯಾಗಿದೆ" ಎಂದು ಹುಲಿಗೆಮ್ಮ ನಾಯಕ್ ತಿಳಿಸಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ