LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರ್ ಕಾಲೇಜು ಸ್ಪರ್ಧಾಕೂಟ -ವಾಣಿಜ್ಯೋದ್ಯಮ ದಿನ ಮತ್ತು ಉದ್ಘಾಟನಾ ಸಮಾರಂಭ

Bengaluru : ದಿನಾಂಕ 28.11.2025 ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಅಂತರ್ ಕಾಲೇಜು (Inter Collegiate Competition) ಸ್ಪರ್ಧಾಕೂಟ ವಾಣಿಜ್ಯೋದ್ಯಮ ದಿನ ಮತ್ತು ಉದ್ಘಾಟನಾ ಸಮಾರಂಭ (ಪಿಯು ವಿದ್ಯಾರ್ಥಿಗಳಿಗೆ) ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಎಸ್.ಎಲ್.ಎನ್. ಕಾರ್ಪ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ (Corp Solutions Pvt. Ltd.,) ನ ಆರ್ಥಿಕ ನಿರ್ದೇಶಕರಾದ ಕುಮಾರಿ. ಸರಾಯು ಸುಧೀಂದ್ರ ರವರು , ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ,ರುಕ್ಮಾಂಗದ ನಾಯ್ಡು ರವರು, ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಎಸ್. ಪಿ .ಮನೋಹರ್ ರವರು ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಉಷಾ ಕುಮಾರಿ ರವರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ರೆಡ್ಡಿ ರವರು ವಿಜ್ಞಾನ ವಿಭಾಗದ ಪ್ರಾಂಶುಪಾಲರಾದ ಮಂಜುನಾಥ್ ರವರು ಎಲ್ಲಾ ವಿಭಾಗದ ಮುಖ್ಯಸ್ಥರುಗಳು ಪ್ರಾಧ್ಯಾಪಕರುಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾದ ಕುಮಾರಿ ಸರಾಯು ಮೇಡಂ ರವರು ಮಾತನಾಡುತ್ತಾ, ತಾನು ಸ್ವತಃ ಒಬ್ಬ ಉದ್ಯಮಿಯಾಗಿದ್ದು, ಉದ್ಯಮ ಕ್ಷೇತ್ರದಲ್ಲಿ ಉತ್ತಮ ಉದ್ಯಮಿ ಯಾಗುವುದು ಹೇಗೆ ಎಂಬುದನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಮಾರಾಟ, ಚೌಕಾಸಿ ಮತ್ತು ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಬದುಕುಳಿಯುವಂತಹ ಕೆಲವು ವಿಷಯಗಳ ಬಗ್ಗೆ ಮನವರಿಕೆ ಮಾಡಿದರು. ಒಬ್ಬ ವ್ಯಕ್ತಿಯು ಉತ್ತಮ ಉದ್ಯಮಿಯಾಗಲು ಯಾವುದೇ ಉತ್ಪನ್ನ ಸೇವೆ ಅಥವಾ ಸಮಸ್ಯೆಯ ಬಗ್ಗೆ ವಿಭಿನ್ನವಾಗಿ ಯೋಚಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ.ರುಕ್ಮಾಂಗದ ನಾಯ್ಡು ರವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ತಮ್ಮ ಕಾಲೇಜಿನಲ್ಲಿ ವಿಶ್ವವಿದ್ಯಾಲಯದಿಂದ ಟಾಪರ್ ಬಂದಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು. ಸಂಸ್ಥೆಯ ಸಾಧನೆ, ಶಿಸ್ತು ಮತ್ತು ಸಂಯಮಗಳ ಬಗ್ಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಎಲ್ಲಾ ಚಟುವಟಿಕೆ ಮತ್ತು ಕ್ರೀಡೆಗಳಲ್ಲಿ ಭಾಗವಹಿ ಸೋಲು- ಗೆಲುವು ಎಂಬ ಭಾವನೆ ಮರೆತು ಎಲ್ಲರೂ ಪ್ರೀತಿ ವಿಶ್ವಾಸದಿಂದ ಆಟಗಳನ್ನು ಆಡಬೇಕೆಂದು ಕರೆ ನೀಡಿದರು ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ, ಶ್ರದ್ಧೆ ಮತ್ತು ಗುರಿ ಕೇಂದ್ರಿತವಾಗಿದ್ದರೆ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಮನವರಿಕೆ ಮಾಡಿದರು. ನಂತರ ಎಲ್ಲರಿಗೂ ಶುಭ ಹಾರೈಸಿದರು. ಸ್ಪರ್ಧೆಗೆ 30 ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ