LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಇಟಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ : ಸಚಿವ ಜೋಶಿ

ನವದೆಹಲಿ : ಉತ್ತರ ಕರ್ನಾಟಕದ ಅದರಲ್ಲಿಯೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಕೈಗಾರಿಕೋದ್ಯಮಿಗಳಿಗೆ ಒಂದು ಸಂತಸದ ಮತ್ತು ಹೆಮ್ಮೆಯ ವಿಷಯ.
ಧಾರವಾಡದ ಇಟ್ಟಿಗಟ್ಟಿಯಲ್ಲಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SಇZ) ವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ. ಈ ಭಾಗದಲ್ಲಿ ಎಲೆಕ್ಟ್ರಾನಿಕ್ಸ್ ಘಟಕಗಳ ಅವಶ್ಯಕತೆ ಮನಗಂಡು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಶ ಗೋಯಲ್ ಅವರಿಗೆ ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಅವರು ವಿನಂತಿಸಿದ್ದರು.
ಜೋಶಿಯವರ ವಿನಂತಿಯ ಮೇರೆಗೆ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯವನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಶ ಗೋಯಲ್ ಘೊಷಿಸಿದ್ದಾರೆ.


ಒಟ್ಟು ೩೯೧ ಎಕರೆ ಭೂಮಿಯನ್ನು ಹೊಂದಿರುವ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್‌ನಲ್ಲಿ ಈಗ ೨೮ ಎಕರೆ ಭೂಮಿಯನ್ನು ಎಲೆಕ್ಟ್ರಾನಿಕ್ಸ್ ವಿಶೇಷ ಆರ್ಥಿಕ ವಲಯ ಎಂದು ಘೋಷಿಸಲಾಗಿದ್ದು ಬರುವ ದಿನಗಳಲ್ಲಿ ಹೊಸ ಎಲೆಕ್ಟ್ರಾನಿಕ್ಸ್ ಉದ್ಯಮಗಳು ಬರುವಂತೆ ವಿಶೇಷ ಆರ್ಥಿಕ ವಲಯದ ವಿಸ್ತರಣೆ ಮಾಡುವ ಅವಕಾಶವಿದೆ.
ನಮ್ಮ ಹುಬ್ಬಳ್ಳಿ -ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ನೀಡಲಿದೆ. ಇದು ಹುಬ್ಬಳ್ಳಿಯನ್ನು ಎಲೆಕ್ಟ್ರಾನಿಕ್ಸ್ ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ಶಕ್ತಿಕೇಂದ್ರವಾಗಿ ಪರಿವರ್ತಿಸುವ ನಿರ್ಣಾಯಕ ಹೆಜ್ಜೆಯಾಗಲಿದೆ. ಹುಬ್ಬಳ್ಳಿ- ಧಾರವಾಡವು ತನ್ನ ಕಾರ್ಯತಂತ್ರದ ಸ್ಥಳ ಮತ್ತು ಕೌಶಲ್ಯಪೂರ್ಣ ಕಾರ್ಮಿಕರ ತಂಡದೊAದಿಗೆ ತ್ವರಿತ ಕೈಗಾರಿಕಾ ಬೆಳವಣಿಗೆ, ಗುಣಮಟ್ಟದ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಗೆ ಸಿದ್ಧವಾಗಿದೆ.
ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸ್ಪಂದಿಸಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SಇZ) ವನ್ನಾಗಿ ಘೋಷಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಶ ಗೋಯಲ್ ಅವರಿಗೆ ಹಾಗೂ ಕರ್ನಾಟಕ ಸರ್ಕಾರದ ವಾಣಿಜ್ಯ, ಕೈಗಾರಿಕೆ ಮತ್ತು ಮೂಲಸೌಕರ್ಯದ ಮಾನ್ಯ ಸಚಿವರಾದ ಶ್ರೀ ಎಂ. ಬಿ. ಪಾಟೀಲ ಅವರಿಗೆ ಧ್ಯನವಾದಗಳನ್ನು ಹೇಳಿರುವ ಸಚಿವ ಜೋಶಿ, ಈ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯವನ್ನು ಪಡೆದ ಏಕಸ್ ಇನ್ಫ್ರಾದ ಆಡಳಿತ ಮಂಡಳಿಗೆ ಅವರ ದೂರದೃಷ್ಟಿ ಮತ್ತು ಬದ್ಧತೆಗಾಗಿ ಹಾರ್ದಿಕ ಅಭಿನಂದನೆಗಳನ್ನೂ ಸಚಿವ ಜೋಶಿ ಅವರು ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ