ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಕೆ-ಸೆಟ್ ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನಾ ಸಹಾಯಕರ (ಜೆಆರ್ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದೆ.
ಆಸಕ್ತರು 2025 ರ ಜುಲೈ 11 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944 / 9964760090 ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[embed]https://www.youtube.com/watch?v=YIm55TxhhfM&t=430s[/embed]
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.