LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಶು ವೈದ್ಯಕೀಯ ಕಾಲೇಜಿನ ಆವರಣದಲ್ಲಿ  “ಮಾವು ಮೇಳ-2025”

ಬೆಂಗಳೂರು, ಜೂನ್‌ 14, (ಕರ್ನಾಟಕ ವಾರ್ತೆ):


 ಅಲುಮ್ನಿ ಅಸೋಸಿಯೇಷನ್, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ    "ಮಾವು ಮೇಳ-2025"ರ ಉದ್ಘಾಟನೆಯನ್ನು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ. ಎಸ್. ರಮೇಶ್ ಇವರು ನೆರವೇರಿಸಿ ಇಂದು ಮತ್ತು ನಾಳೆ ಈ ಮೇಳವು ಮಾವು ಬೆಳೆಗಾರರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ತಾಜ ಮಾವಿನಹಣ್ಣು ದೊರಕುತ್ತದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು.


ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಡಾ. ಕೆ. ಸಿ. ವೀರಣ್ಣ, ಕುಲಪತಿಗಳು, ಕ.ಪ.ಪ.ಮಿ.ವಿ.ವಿ., ಬೀದರ ಇವರು ಮಾತನಾಡಿ ಮಾವಿನ ಎಲ್ಲಾ ಜಾತಿಯ ತಳಿಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಇಂತಹ ಮೇಳಗಳನ್ನು ನಿರಂತರವಾಗಿ ಏರ್ಪಡಿಸುವುದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಅನುಕೂಲಕರವಾಗಲಿದೆ ಎಂದು ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಡಾ. ಹೆಚ್. ಎಲ್. ಹರೀಶ್, ಆಡಳಿತ ಮಂಡಳಿ ಸದಸ್ಯರು, ಕೃ.ವಿ.ವಿ., ಬೆಂಗಳೂರು ಇವರು ವಹಿಸಿದ್ದರು.


ಕಾರ್ಯಕ್ರಮದಲ್ಲಿ ಡಾ. ಸಿ. ಜಿ. ನಾಗರಾಜು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಮತ್ತು ಅಲುಮ್ನಿ ಅಸೋಸಿಯೇಷನ್‌ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ