LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಶಾ ಮುಕ್ತ ಭಾರತ ಅಭಿಯಾನ ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಬೆಂಗಳೂರು, ಅಗಸ್ಟ್ 26 (ಕರ್ನಾಟಕ ವಾರ್ತೆ) : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ  ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‌ಸಿಂಗ್ ತಿಳಿಸಿದ್ದಾರೆ.


ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ.


ಈ ಬೃಹತ್ ಅಭಿಯಾನವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ ಸಿಂಗ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅರಣ್ಯ) ಮನೋಜಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ) ಆರ್.ರವಿಶಂಕರ್,ಬಂಡೀಪುರ ಹುಲಿ ಮೀಸಲು ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕ ಎಸ್.ಪ್ರಭಾಕರನ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರ  ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ರೂಪಿಸಿದ್ದಾರೆ.


ದೇಶಾದ್ಯಂತ 1 ಲಕ್ಷ ಕಿಲೋಮೀಟ‌ರುಗಳಿಗೂ ಹೆಚ್ಚು ಪ್ರಯಾಣವನ್ನು ಸೈಕ್ಲಿಂಗ್‌ನಲ್ಲಿ ಕ್ರಮಿಸಿ ಅಪ್ರತಿಮ ಸಾಧನೆ ಮಾಡಿರುವ ರೈಡರ್  ನಂದಿನಿ ಮಿಥುನ್  ಈ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ. ಅವರು ತಮ್ಮ ಅಸಾಧಾರಣ ಅನುಭವಗಳು ಮತ್ತು ಬದ್ಧತೆಯಿಂದ ಸಾಮಾಜಿಕ ಉದ್ದೇಶಗಳ ಕಡೆಗೆ ಯುವಕರನ್ನು ಪ್ರೇರೇಪಿಸಲಿದ್ದಾರೆ.


ಈ ಗಣ್ಯರು ಶಾಲೆಗಳು, ಕಾಲೇಜುಗಳು, ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸಿ, ಯುವಜನತೆಗೆ ಉದ್ದೇಶಿತ ಜಾಗೃತಿ ಭಾಷಣಗಳು ಮತ್ತು ಸಂದೇಶಗಳನ್ನು ನೀಡಲಿದ್ದಾರೆ.


ಕರ್ನಾಟಕ ಸರ್ಕಾರವು ಈ ಜಾಥಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವ ಪ್ರಯತ್ನವಾಗಿ ಹಮ್ಮಿಕೊಳ್ಳುತ್ತಿದೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ