LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಸಾಲ ಸೌಲಭ್ಯಕ್ಕಾಗಿ ಮರಾಠ ಸಮುದಾಯದವರಿಂದ ಆನ್‌ಲೈನ್ ಅರ್ಜಿ ಆಹ್ವಾನ

ತುಮಕೂರು(ಕ.ವಾ.)ಜೂ.9: ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಮರಾಠ ಮತ್ತು ಇದರ ಉಪಜಾತಿಗೆ ಸೇರಿದ ಜನರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಶ್ರೀ ಶಹಾಜಿರಾಜೇ ಸಮೃದ್ಧಿ, ಬೀಜಾವು-ಜಲಭಾಗ್ಯ(ಗಂಗಾಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ(ಹೊಸತು), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ, ಮರಾಠ ಮಿಲ್ಟಿç ಹೋಟೆಲ್, ಸ್ವಯಂ ಉದ್ಯೋಗ ಸಾಲ( ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಸ್ವಾವಲಂಬಿ ಸಾರಥಿ ಹಾಗೂ ಸ್ವಾತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು https://sevasindhu.karnataka.gov.in ಮೂಲಕ ಜುಲೈ 4ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್https://kmcdc.karnataka.gov.in ಅಥವಾ ನಿಗಮದ ಸಹಾಯವಾಣಿ 8867537799, 080-29903994 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816-2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ