LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುವುದು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ಇಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2025 ನ್ನು ಉದ್ಘಾಟಿಸಿ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಪರಿಸರ ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ "ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ" ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕು. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂದು ತಿಳಿಸಿದರು.

ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ:


ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇಂದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನವನ್ನು ಎಲ್ಲರೂ ಮಾಡಬೇಕು ಎಂದು ತಿಳಿಸಿದರು.

ಇಂದು ನಾವು ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ. ಬೆಂಗಳೂರು ಒಂದರಲ್ಲೇ ದಿನವೊಂದಕ್ಕೆ 900 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. 1.50 ಜನಸಂಖ್ಯೆಯನ್ನು ಬೆಂಗಳೂರು ಹೊಂದಿದೆ. ಜನಸಂಖ್ಯೆ ಬೆಳೆದಷ್ಟು ಪರಿಸರದ ಮೇಲೆ ಹಾನಿ ಉಂಟಾಗುತ್ತಿದೆ. ದೇಶ ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿದೆ. ಜನಸಂಖ್ಯೆಯ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು:


ಭೂಮಿಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೇ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಒಂದು ಬಾರಿ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು.

ಪ್ಲಾಸ್ಟಿಕ್ ಗೆ ಪರ್ಯಾಯ:

ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು ಎಂದರು.

ಗಿಡ ಮರಗಳನ್ನು ನೆಟ್ಟು ಬೆಳೆಸೋಣ :


ಪುನರ್ಬಳಕೆ ಮತ್ತು ಮರುಬಳಕೆ ಪೆÇ್ರೀತ್ಸಾಹಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಲ್ಲಿಸೋಣ, ಸಾರ್ವಜನಿಕ ಸಾರಿಗೆ ಉಪಯೋಗಿಸೋಣ, ಹತ್ತಿರದ ಸ್ಥಳಗಳಿಗೆ ನಡೆದು ಹೋಗುವ ಅಥವಾ ಸೈಕಲ್ ಬಳಕೆ ಮಾಡೋಣ, ಹನಿ ಹನಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳೋಣ , ನೀರನ್ನು ಪೆÇೀಲು ಮಾಡದೇ ಜವಾಬ್ದಾರಿಯುತವಾಗಿ ಬಳಸೋಣ. ಸಾಧ್ಯವಾದ ಮಟ್ಟಿಗೆ ಪ್ರತಿಯೊಬ್ಬರೂ ಇದನ್ನು ಕರ್ತವ್ಯ ಎಂದು ಅರಿತು 'ನನ್ನ ಜೀವ ನನ್ನ ಮರ' ಎಂದು ಗಿಡ ಮರಗಳನ್ನು ನೆಟ್ಟು ಬೆಳೆಸೋಣ. ನಾನು ಪರಿಸರ ನ್ಯಾಯ, ಸುಸ್ಥಿರ ಬದ್ಧತೆಗೆ ಸಂಪೂರ್ಣ ಒಪ್ಪಿಗೆ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರಿನಲ್ಲಿ ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಬೆಂಗಳೂರಿನಲ್ಲಿ ಅರಣ್ಯ ಇಲಾಖೆಗೆ ಸೇರಿರುವ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ಧಿ ಮಾಡಲು ಅರಣ್ಯ ಇಲಾಖೆ ಮುಂದಾದರೆ ಪಾಲಿಕೆಯಿಂದ ಅಗತ್ಯ ಧನಸಹಾಯ ನೀಡಲಾಗುವುದು ಎಂದರು.

ಕಬ್ಬನ್ ಪಾರ್ಕ್, ಲಾಲ್ ಬಾಗ್ ರೀತಿ ಉದ್ಯಾನಗಳನ್ನು ಅಭಿವೃದ್ಧಿಪಡಿಸಿದರೆ ಬೆಂಗಳೂರು ನಗರದಾದ್ಯಂತ ಇರುವ ಅರಣ್ಯ ಇಲಾಖೆ ಜಾಗಗಳು ಉಳಿದಂತಾಗುತ್ತದೆ. ಸಾರ್ವಜನಿಕರಿಗೂ ಅನುಕೂಲವಾಗುತ್ತದೆ ಎಂದು ಹೇಳಿದರು.

ಭೂಮಿ ನಮಗೆ ಸೇರಿದ್ದಲ್ಲ, ನಾವು ಭೂಮಿಗೆ ಸೇರಿದವರು ಎನ್ನುವುದನ್ನು ಯಾರೊಬ್ಬರು ಮರೆಯಬಾರದು. ಪ್ರಕೃತಿ ಉಚಿತವಾಗಿ ಊಟ ಕೊಡುತ್ತಿದೆ ಎಂದು ಅದನ್ನು ಕಂಠಪೂರ್ತಿ ತಿನ್ನಬಾರದು. ಭವಿಷ್ಯಕ್ಕೂ ಉಳಿಸಬೇಕು ಎಂದು ತಿಳಿಸಿದರು.

ಸುತ್ತಲಿನ ಪ್ರಕೃತಿ, ಮಣ್ಣು, ನೀರನ್ನು ಉಳಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಹಸಿರು ಮತ್ತು ಉಸಿರನ್ನು ರಕ್ಷಿಸುವ ಗ್ಯಾರಂಟಿಯನ್ನು ನಮ್ಮ ಸರ್ಕಾರ ನೀಡಲಿದೆ. ಪ್ರಕೃತಿಯಿಂದ ನಾವು ತೆಗೆದುಕೊಳ್ಳುವುದಕ್ಕಿಂತ ಹೆಚ್ಚಿಗೆ ಅದಕ್ಕೆ ವಾಪಸ್ ಕೊಡಬೇಕು. ಈ ಭೂಮಿ ಉಳಿದರೆ ಮಾತ್ರ ನಾವು ಉಳಿಯುತ್ತೇವೆ ಎಂದರು.

ನಾವುಗಳು ನಮ್ಮ ಜೀವಿತಾವಧಿಯಲ್ಲಿ ಒಂದೊಂದು ಮರವನ್ನು ಬೆಳೆಸುವಂತಹ ಸಂಕಲ್ಪವನ್ನು ತೆಗೆದುಕೊಳ್ಳಬೇಕು. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ನಗರದ ಶಾಲೆಗಳ ವಿದ್ಯಾರ್ಥಿಗಳು ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ಯೋಜನೆ ರೂಪಿಸಿದೆವು. ಕಳೆದ ವರ್ಷ ಸುಮಾರು 50 ಸಾವಿರ ಸಸಿಗಳನ್ನು ನೆಡಲಾಗಿದೆ. ಇವುಗಳನ್ನು ವಿದ್ಯಾರ್ಥಿಗಳೇ ಪೆÇೀಷಿಸುತ್ತಿದ್ದಾರೆ ಎಂದು ಹೇಳಿದರು.

ಪ್ರತಿ ಶಾಲೆಯಲ್ಲಿ 25 ವಿದ್ಯಾರ್ಥಿಗಳನ್ನು ಒಳಗೊಂಡ ‘ಕ್ಲೈಮೆಟ್ ಆಕ್ಷನ್ ಕ್ಲಬ್ʼ ರಚನೆ ಮಾಡಬೇಕು ಎಂದು ಸೂಚನೆ ನೀಡಿದ್ದೇವೆ. ಬೆಂಗಳೂರಲ್ಲಿ 1.20 ಕೋಟಿಗೆ ವಾಹನಗಳ ಸಂಖ್ಯೆ ಏರಿಕೆಯಾಗಿದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗಿದೆ. ಇದನ್ನು ನಿಯಂತ್ರಣ ಮಾಡಲು ನಾವು ಆಲೋಚನೆ ಮಾಡಬೇಕಿದೆ” ಎಂದು ಹೇಳಿದರು.

ನನ್ನ ಹುಟ್ಟುಹಬ್ಬದ ದಿನ ಕಬಿನಿ ಹಿನ್ನೀರಿನ ಅರಣ್ಯಕ್ಕೆ ಭೇಟಿ ನೀಡಿದ್ದೆ. ಅತ್ಯಂತ ಸಂಪತ್ ಭರಿತವಾದ ಪ್ರಾಣಿ ಸಂಕುಲವನ್ನು ನಾನು ನೋಡಿದೆ. ಆಗ ವಿದೇಶದಲ್ಲಿರುವಂತೆ ನನಗೆ ಭಾಸವಾಯಿತು ಎಂದು ಹೇಳಿದರು.

ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಈಶ್ವರ ಖಂಡ್ರೆ


ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯ ಜನ-ಜಾನುವಾರುಗಳ ಆರೋಗ್ಯಕ್ಕೆ ಕಂಟಕವಾಗಿದ್ದು, ಪರಿಸರಕ್ಕೂ ಮಾರಕವಾಗಿದೆ. ಏಕಬಳಕೆ ಪ್ಲಾಸ್ಟಿಕ್  ನಿರ್ಮೂಲನೆ ಕಾನೂನಿನಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಇಚ್ಛಾಶಕ್ತಿ ಅಗತ್ಯ ಎಂದು ಅಭಿಪ್ರಾಯಪಟ್ಟರು.


ಈ ಬಾರಿಯ ವಿಶ್ವ ಪರಿಸರ ದಿನದ ಧ್ಯೇಯ ವಾಕ್ಯ ಪ್ಲಾಸ್ಟಿಕ್ ತ್ಯಾಜ್ಯ ಕೊನೆಗಾಣಿಸೋಣ ಎಂಬುದಾಗಿದ್ದು. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದರು.

ಬೆಂಗಳೂರು ನಗರದ ಹಸಿರು ಹೊದಿಕೆ ವೃದ್ಧಿಗೆ ಕ್ರಮ:

ನಿವೃತ್ತರ ಸ್ವರ್ಗ, ಉದ್ಯಾನ ನಗರಿ ಎಂದು ಖ್ಯಾತವಾಗಿದ್ದ ಬೆಂಗಳೂರು ಇಂದು ಕಾಂಕ್ರೀಟ್ ಕಾಡಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶ್ವಾಸ ತಾಣ ಉಳಿಸಲು ಹೆಸರುಘಟ್ಟ ಹುಲ್ಲುಗಾವಲಿನ 5678 ಎಕರೆ ಪ್ರದೇಶವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ ಎಂದರು.
ಬೆಂಗಳೂರು ಉತ್ತರದ ಯಲಹಂಕ ಬಳಿ 153 ಎಕರೆ ಭೂಮಿಯಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಇನ್ನು 2 ತಿಂಗಳೊಳಗೆ ವಿಸ್ತøತ ಯೋಜನಾ ವರದಿ ಸಿದ್ಧಪಡಿಸಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ಮಾಡಿಸಲಾಗುವುದು ಎಂದರು.

ಮರುಬಳಕೆ, ಪುನರ್ ಬಳಕೆ ಇಂದಿನ ಅಗತ್ಯ:
ಹಿಂದೆ ನಮ್ಮ ಪೂರ್ವಿಕರು ನೈಸರ್ಗಿಕ ಸಂಪನ್ಮೂಲವನ್ನು ಹಿತಮಿತವಾಗಿ ಬಳಕೆ ಮಾಡುತ್ತಿದ್ದರು. ಪುನರ್ ಬಳಕೆ ಮಾಡುತ್ತಿದ್ದರು, ಸುಸ್ಥಿರ ಅಭಿವೃದ್ಧಿಗೆ ಪುನರ್ ಬಳಕೆ, ಮರು ಬಳಕೆ ಅನಿವಾರ್ಯ ಎಂದು ತಿಳಿಸಿದರು.
ಮಹಾತ್ಮಾ ಗಾಂಧೀಜಿ ಅವರು “ಪ್ರಕೃತಿ, ಪರಿಸರ ಇರುವುದು ಮನುಷ್ಯನ ಅವಶ್ಯಕತೆ ಪೂರೈಸುವುದಕ್ಕೇ ಹೊರತು, ದುರಾಸೆ ಪೂರೈಸುವುದಕ್ಕಲ್ಲ’’ ಎಂದು ಹೇಳಿದ್ದಾರೆ, ನಾವೆಲ್ಲರೂ ಮಹಾತ್ಮಾ ಗಾಂಧೀ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದರು.

ವಿಶ್ವ ಪರಿಸರ ದಿನಕ್ಕೆ ಎರಡು ಮಹತ್ವದ ಆದೇಶ:

ವಿದ್ಯಾವಂತ ಜನರೇ ತಾವು ಖರೀದಿಸುವ ಖನಿಜಯುಕ್ತ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ರಸ್ತೆಯಲ್ಲಿ ಎಸೆಯುತ್ತಾರೆ. ಇದನ್ನು ತಡೆಯಲು ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ರಚಿಸಲು ಆದೇಶ ಮಾಡಲಾಗಿದೆ, ತಯಾರಕರ ವಿಸ್ತರಿತ ಜವಾಬ್ದಾರಿಯಂತೆ ಖಾಲಿ ನೀರಿನ ಬಾಟಲಿ ಮರು ಖರೀದಿಸುವುದನ್ನು ಕಡ್ಡಾಯ ಮಾಡಲು ಚಿಂತಿಸಲಾಗಿದೆ ಎಂದು ತಿಳಿಸಿದರು.
ಅದೇ ರೀತಿ ರಸ್ತೆಯ ಬದಿಯಲ್ಲಿ ಸರ್ಕಾರ ನೆಡುವ ಗಿಡ, ಮರದ ಸುತ್ತ, ಎನ್.ಜಿ.ಟಿ. ಆದೇಶದಂತೆ ಒಂದು ಮೀಟರ್ ಸುತ್ತಳತೆ ಮಣ್ಣಿರಬೇಕು, ಹೀಗಾಗಿ ಅಲ್ಲಿ ಹಾಕಿರುವ ಕಾಂಕ್ರೀಟ್ ತೆಗೆಯುವಂತೆ ಆದೇಶ ಮಾಡಲಾಗಿದ್ದು, ಇದನ್ನು ಇಂದು ಮಾನ್ಯ ಮುಖ್ಯಮಂತ್ರಿಗಳೇ ವಿಶ್ವ ಪರಿಸರ ದಿನದ ಕೊಡುಗೆಯಾಗಿ ಬಿಡುಗಡೆ ಮಾಡುತ್ತಿದ್ದಾರೆ ಎಂದರು.

ವೃಕ್ಷೋ ರಕ್ಷತಿ ರಕ್ಷಿತಃ
ಯಾರು ಮರಗಳನ್ನು ಉಳಿಸುತ್ತಾರೋ ಅವರನ್ನು ಪರಿಸರ ಮತ್ತು ಪ್ರಕೃತಿಯೂ ಸಂರಕ್ಷಿಸುತ್ತದೆ. ಇದನ್ನು ಅರಿತು ಪ್ರತಿಯೊಬ್ಬರೂ ಪರಿಸರ ಪ್ರಜ್ಞೆ ಬೆಳೆಸಿಕೊಂಡು ನಿರ್ಮಲ ಪರಿಸರಕ್ಕಾಗಿ ಶ್ರಮಿಸಬೇಕು. ಮನೆಯ ಮುಂದೆ ಗಿಡ ನೆಟ್ಟು ಪೆÇೀಷಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಪರಿಸರ ಪ್ರಶಸ್ತಿ ಪ್ರದಾನ ಮಾಡಲಾಯಿತು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ 2 ವರ್ಷಗಳ ಸಾಧನೆ ಸಾರುವ “ತುಂಬಿತು 2 ವರುಷ, ಹಸಿರು ಸಂರಕ್ಷಣೆಯ ಹರುಷ” ಎಂಬ ಕಿರುಹೊತ್ತಗೆಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಬೈರತಿ ಸುರೇಶ್, ಡಾ. ಕೆ.ಸುಧಾಕರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೆÇನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.


ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಪ್ರಸ್ತಾವಿಕವಾಗಿ ಮಾತನಾಡಿ ಇಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗಾಣಿಸೋಣ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. 1972ನೇ ಇಸವಿಯಲ್ಲಿ ನಡೆದ ವಿಶ್ವ ಪರಿಸರ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯದಂತೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ದೃಷ್ಟಿಯಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನಾರಣೆಯನ್ನು ಆಚರಿಸಲಾಗುತ್ತದೆ.


ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳು ಜೊತೆಗೂಡಿ ನಿμÉೀಧಿತ ಪ್ಲಾಸ್ಟಿಕ್ಗಳನ್ನು ತಯಾರಿಸುತ್ತಿರುವ, ಮಾರಾಟ ಮಾಡುತ್ತಿರುವ, ಉಪಯೋಗಿಸುತ್ತಿರುವ ಸ್ಥಳಗಳಿಗೆ ದಾಳಿ ನಡೆಸಿ ನಿμÉೀಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ಸುಮಾರು 1,65,000 ತಪಾಸಣೆ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ ಸುಮಾರು 1012 ಟನ್ಗಳಷ್ಟು ನಿμÉೀಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ತಪ್ಪಿತಸ್ಥರಿಂದ ಸುಮಾರು ರೂ.5.6 ಕೋಟಿಯಷ್ಟು ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.


ಪರಿಸರ ಸಂರಕ್ಷಣೆಯ ಹಿತ ದೃಷ್ಟಿಯಿಂದ ಪ್ರಧಾನಮಂತ್ರಿ ದಿ. ಶ್ರೀಮತಿ ಇಂದಿರಾಗಾಂಧಿಯವರು 1974 ರಲ್ಲಿ ಜಲಮಾಲಿನ್ಯ ನಿಯಂತ್ರಣ ಕಾಯಿದೆ, 1980ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ, 1981ರಲ್ಲಿ ವಾಯುಮಾಲಿನ್ಯ ನಿಯಂತ್ರಣ ಕಾಯಿದೆಯನ್ನು, ಪ್ರಧಾನಮಂತ್ರಿ ದಿ. ರಾಜೀವ್ ಗಾಂಧಿ 1986ರಲ್ಲಿ ಪರಿಸರ ಸಂರಕ್ಷಣೆ ಕಾಯಿದೆ ಪ್ರಧಾನಮಂತ್ರಿ ದಿ. ಮನಮೋಹನ್ ಸಿಂಗ್ ಅವರು ನ್ಯಾಷನಲ್ ಗ್ರೀನ್ ಟ್ರಿಬುನಲ್ ಆಕ್ಟ್ 2010 ಜಾರಿಗೊಳಿಸಿದ್ದಾರೆ.


ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿವಿಧ ಪರಿಸರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಪರಿಸರದ ಕುರಿತು ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.


ಮಂಡಳಿಯಲ್ಲಿ ವಾಹನಗಳ ಕೊರತೆ ಇತ್ತು. ಮುಖ್ಯಮಂತ್ರಿಗಳು ವಾಹನ ಖರೀದಿಗೆ ಅನುವು ಮಾಡಿಕೊಟ್ಟಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳ ಪಠ್ಯಪುಸ್ತಕದಲ್ಲಿ ಪರಿಸರದ ಜ್ಞಾನದ ಕುರಿತ ಪಾಠವನ್ನು ಜಾರಿಗೊಳಿಸುವುದು ಅವಶ್ಯಕ ಎಂದು ತಿಳಿಸಿದರು.
ತ್ಯಾಜ್ಯ ನಿಯಂತ್ರಿಸುವುದು, ಈ ವೇಸ್ಟ್ ಸಮಸ್ಯೆಯ ನಿವಾರಣೆಗೆ ಮಂಡಳಿಯು ಕಾರ್ಯ ಸನ್ನದ್ಧವಾಗಿದೆ. ಕೈಗಾರಿಕೋದ್ಯಮದ ಜೊತೆಗೆ ಮಾಲಿನ್ಯ ನಿಯಂತ್ರಣದಲ್ಲಿ ಕ್ರಮವಹಿಸೋಣ ಎಂದು ತಿಳಿಸಿದರು.


ಪ್ಲಾಸ್ಟಿಕ್ ಬಳಕೆಯು ಮನುಷ್ಯರಿಗೂ ಹಾಗೂ ಜೀವಸಂಕುಲಕ್ಕೆ ಹಾನಿ ಈ ದಿಸೆಯಲ್ಲಿ ಮುಖ್ಯಮಂತ್ರಿಗಳು 2015ರಲ್ಲಿ ಪ್ಲಾಸ್ಟಿಕ್ ನಿμÉೀಧ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದರು.



ಇದೇ ಸಂದರ್ಭದಲ್ಲಿ ಪರಿಸರ ಪ್ರತಿಜ್ಞಾವಿಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೋಧಿಸಿದರು. ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ 2024 ಮತ್ತು 2025 ಪ್ರದಾನ ಮಾಡಿದರು. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪಬಂಧ ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ 2 ವರ್ಷಗಳ ಸಾಧನೆ ಸಾರುವ “ತುಂಬಿತು ಎರಡು ವರುಷ, ಹಸಿರು ಸಂರಕ್ಷಣೆಯ ಹರುಷ” ಎಂಬ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ವಿಶ್ವ ಪರಿಸರ ದಿನದ ಅಂಗವಾಗಿ 2 ಮಹತ್ವದ ಸರ್ಕಾರಿ ಆದೇಶವನ್ನು ಅಧಿಕೃತವಾಗಿ ಅನಾವರಣ ಮಾಡಿದರು.


ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ ಬಿ. ಎಸ್., ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಮ್ ಅಹಮದ್, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಪ್ರಧಾನ ಕಾರ್ಯದರ್ಶಿ (ಜೀವಿಪರಿಸ್ಥಿತಿ ಮತ್ತು ಪರಿಸರ) ವಿಜಯ ಮೋಹನ್ ರಾಜ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಲಿಂಗರಾಜ ಎಸ್.ಎಸ್., ಸದಸ್ಯರುಗಳಾದ ಮರಿಸ್ವಾಮಿಗೌಡ ಕೆ, ಡಾ.ಪ್ರದೀಪ್ ಸಿ, ಶರಣ್ ಕುಮಾರ್ ಎಂ.ಮೋದಿ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ