LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Shikshana Ratna 2025: ಪ್ರತಿಷ್ಠಿತ ಶಿಕ್ಷಣ ರತ್ನ ವಾರ್ಷಿಕ ಪ್ರಶಸ್ತಿ ಪುರಸ್ಕಾರ

ಬೆಂಗಳೂರು: ಶಿಕ್ಷಣ ರತ್ನ ರಾಷ್ಟ್ರೀಯ ಶೈಕ್ಷಣಿಕ ಕನ್ನಡ ಮತ್ತು ಆಂಗ್ಲ ಮಾಸಪತ್ರಿಕೆಯು (Shikshana Ratna national educational monthly magazine in Kannada and English) ಪ್ರತಿವರ್ಷದಂತೆ ಈ ಬಾರಿಯೂ ಅರ್ಹ ಶಿಕ್ಷಕರಿಗೆ ಪ್ರತಿಷ್ಠಿತ ವಾರ್ಷಿಕ ಪುರಸ್ಕಾರ (Prestigious Shikshana Ratna Annual Awards) ಸಮಾರಂಭ ಹಮ್ಮಿಕೊಂಡಿದೆ. 2025ನೇ ಶೈಕ್ಷಣಿಕ ಸಾಲಿನ ಶ್ರೇಷ್ಠ ಸಾಧಕ ಪುರಸ್ಕಾರ ಸಂದರ್ಭದಲ್ಲಿ ಶಿಕ್ಷಕರನ್ನು ಗುರುತಿಸಿ, ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಾಥಮಿಕ ಶಾಲೆಯಿಂದ ವಿಶ್ವವಿದ್ಯಾಲಯದವರೆಗಿನ ಎಲ್ಲ ಶಿಕ್ಷಕವೃಂದದವರೂ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದು.

ಶಿಕ್ಷಕರ ದಿನಾಚರಣೆ ಅಂಗವಾಗಿ ಇದೇ ಸೆಪ್ಟೆಂಬರ್ ತಿಂಗಳ ಕೊನೆಯ ವಾರದಲ್ಲಿ ಶಿಕ್ಷಣ ರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ಎಲ್ಲ ಶಿಕ್ಷಕರು "ಮೊಬೈಲ್ ಬಿಡಿ-ಪುಸ್ತಕ ಹಿಡಿಯಿರಿ" ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳೋಣ.

ಇದೇ ಸಂದರ್ಭದಲ್ಲಿ ಮಾನ್ಯ ಶಿಕ್ಷಣ ಸಚಿವರು, ಶಾಸಕರು, ಇಲಾಖೆ ಉನ್ನತಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರುತ್ತಾರೆ. ಶಿಕ್ಷಕರಿಗೆ ಸಂಬಂಧಪಟ್ಟ ವಿಚಾರಗಳ ಕುರಿತು ತಜ್ಞರು ವಿಚಾರಗೋಷ್ಠಿ ನಡೆಸಿಕೊಡಲಿದ್ದಾರೆ. ವಿಶೇಷ ಸ್ಮರಣ ಸಂಚಿಕೆಯು ಬಿಡುಗಡೆಯಾಗಲಿದೆ. ಆಸಕ್ತ ಶಿಕ್ಷಕರು ತಮ್ಮ ಸ್ವವಿವರಗಳನ್ನು ಶಿಕ್ಷಣ ರತ್ನ ಪತ್ರಿಕಾ ಕಚೇರಿಗೆ ಕಳುಹಿಸಿಕೊಡಲು ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ಕೆ ಎಸ್ ವಿಜಯಕುಮಾರ್ - 92431 92802 
ಮತ್ತು ಬಿ ಕೆ ಪ್ರಸನ್ನ - 94481 19247 

ಹೆಸರು ನೋಂದಾಯಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 20, 2025.

  • ವಿಳಾಸ : 554/2, 2ನೇ ಮಹಡಿ,ಸಂಪಿಗೆ ರಸ್ತೆ 13ನೇ ಅಡ್ಡ ರಸ್ತೆ,  ಮಲ್ಲೇಶ್ವರ, ಬೆಂಗಳೂರು -03


[email protected]
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ