ಕೊರೊನಾ ಹೆಚ್ಚಳ: ಮಾಸ್ಕ್ ಧರಿಸುವಂತೆ ಪಂಜಾಬ್ ಸರ್ಕಾರಕ್ಕೆ ಆದೇಶ
ನವದೆಹಲಿ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಕೇಂದ್ರ ಆರೋಗ್ಯ ಇಲಾಖೆ ಮತ್ತು ಪಂಜಾಬ್ ಸರ್ಕಾರವು ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದೆ. ವಿಶೇಷವಾಗಿ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್ ಕಡ್ಡಾಯವಾಗಿ ಬಳಸಲು ಸೂಚಿಸಲಾಗಿದೆ.
ಜನನಿಬಿಡ
ಸ್ಥಳಗಳಾದ ವಾಣಿಜ್ಯ ಮಾರುಕಟ್ಟೆ, ಸಾರ್ವಜನಿಕ ಸಾರಿಗೆ ಮತ್ತು ಕಚೇರಿಗಳಲ್ಲಿ ಮಾಸ್ಕ್ ಧರಿಸುವಂತೆ ಆದೇಶಿಸಲಾಗಿದೆ. ಜನರು ವೈಯಕ್ತಿಕ ನೈರ್ಮಲ್ಯ ಕಾಪಾಡಿಕೊಳ್ಳುವುದರ ಜೊತೆಗೆ, ಕೆಮ್ಮು, ಜ್ವರ ಅಥವಾ ಶೀತದ ಲಕ್ಷಣ ಕಂಡುಬAದಲ್ಲಿ ಕೂಡಲೇ ಪ್ರತ್ಯೇಕವಾಗಿ ಉಳಿದು ಚಿಕಿತ್ಸೆ ಪಡೆಯತಕ್ಕದ್ದು ಎಂದು ಪಂಜಾಬ್ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ.
ಈಗಾಗಲೇ ಆರೋಗ್ಯ ಕಾರ್ಯಕರ್ತರಿಗೆ ವಿಶೇಷ ಜಾಗೃತಿ ಸಹಾ ನೀಡಲಾಗಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ನಿಯಮಿತವಾಗಿ ಬಳಸಬೇಕು. ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮುಚ್ಚಿಕೊಳ್ಳುವುದು, ಕೈಗಳನ್ನು ಆಗಾಗ್ಗೆ ಶುಭ್ರವಾಗಿ ತೊಳೆಯುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆಯೂ ಕೋರಲಾಗಿದೆ.
ಅಂತೆಯೇ, ಪಂಜಾಬ್ ಸರ್ಕಾರವು ಇದುವರೆಗೆ ಲಾಕ್‌ಡೌನ್ ಅಥವಾ ಕಠಿಣ ನಿರ್ಬಂಧಗಳನ್ನು ವಿಧಿಸಿಲ್ಲವಾದರೂ, ಸೋಂಕಿನ ಪ್ರಮಾಣ ಹೆಚ್ಚಾಗಿ ಕಂಡು ಬಂದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಜನಸಾಮಾನ್ಯರು, ಸರ್ಕಾರದ ಮಾರ್ಗಸೂಚಿ ಆದೇಶಗಳಿಗೆ ಸಹಕರಿಸುವಂತೆಯೂ ಮನವಿ ಮಾಡಲಾಗಿದೆ.
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.