LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

'ಸಂಸ್ಕಾರ ಸುಧಾ' ಬೇಸಿಗೆ ಶಿಬಿರ

"ಧರ್ಮೋ ರಕ್ಷತಿ ರಕ್ಷಿತಃ" ಎಂಬ ಆಪ್ತವಾಕ್ಯದಂತೆ, ಧರ್ಮ ಮತ್ತು ಸಂಸ್ಕಾರಗಳ ರಕ್ಷಣೆಯೇ ಸದೃಢ ಸಮಾಜಕ್ಕೆ ಮೂಲಾಧಾರವಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಮೌಲ್ಯಗಳು ಕ್ಷೀಣಿಸುತ್ತಿವೆ ಎಂಬ ಆತಂಕದ ನಡುವೆ, ಕೇವಲ ಶೈಕ್ಷಣಿಕ ಅಂಕಗಳಿಗೆ ಸೀಮಿತವಾಗದ ಮೌಲ್ಯಯುತ ಶಿಕ್ಷಣದ ಅಗತ್ಯವಿದೆ. ಈ ಪವಿತ್ರ ಆಶಯದೊಂದಿಗೆ, ಬಾಲಭಾರತೀ (ದಕ್ಷಿಣಾಮ್ನಾಯ ಶ್ರೀ ಶಾರದಾಪೀಠದ ಅಂಗಸಂಸ್ಥೆ)
ಜಗದ್ಗುರುಗಳ ದಿವ್ಯ ಮಾರ್ಗದರ್ಶನದಲ್ಲಿ, ಕರ್ನಾಟಕ ದಾದ್ಯಂತ 'ಸಂಸ್ಕಾರ ಸುಧಾ' ಬೇಸಿಗೆ ಶಿಬಿರಗಳನ್ನು ಆಯೋಜಿಸಲು ಸಂಕಲ್ಪಿಸಲಾಗಿದೆ. ಮಕ್ಕಳಲ್ಲಿ ರಾಷ್ಟ್ರಪ್ರೇಮ, ಭವ್ಯ ಇತಿಹಾಸ ಹಾಗೂ ಭಾರತೀಯ ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ಜ್ಞಾನದೀಪ್ತಿಯನ್ನು ಮಕ್ಕಳ ಮನಸ್ಸಿನಲ್ಲಿ ಬೆಳಗಲು ಸಮರ್ಥ ಶಿಕ್ಷಕರೇ ಅತ್ಯಗತ್ಯ. ಈ ಶಿಬಿರವನ್ನು ಯಶಸ್ವಿಯಾಗಿ ನಡೆಸುವ ಶಿಕ್ಷಕರಿಗೆ ಯೋಗ್ಯವಾದ ಗೌರವಧನ ನೀಡಲಾಗುತ್ತದೆ.
ಬೋಧನೆಯು ಕೇವಲ ಉದ್ಯೋಗವಾಗದೆ, ಒಂದು ತಪಸ್ಸಿನಂತೆ ಸಮಾಜದ ನವನಿರ್ಮಾಣಕ್ಕೆ ದಾರಿದೀಪವಾಗಲಿ. ಬನ್ನಿ, ಈ ಮಹತ್ತರ ಕಾರ್ಯದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಮುಂದಿನ ಪೀಳಿಗೆಗೆ ಸಂಸ್ಕಾರದ ಅಮೃತವನ್ನು ಹಂಚೋಣ.
📍 ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ಪೋಸ್ಟರ್‌ನಲ್ಲಿರುವ QR ಕೋಡ್ ಅನ್ನು ಸ್ಕ್ಯಾನ್ ಮಾಡಿ.
✨ ವಿದ್ಯಾರ್ಥಿಗಳ ಗಮನಕ್ಕೆ: ನೀವೇನಾದರೂ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದ್ದರೆ, ಇಲ್ಲಿ ನಿಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿ ನೋಂದಾಯಿಸಿಕೊಳ್ಳಬಹುದು - visit: http://tinyurl.com/SSCampKA
ಶಾರದೇ ಪಾಹಿಮಾಂ ಶಂಕರ ರಕ್ಷಮಾಂ!
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ