LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ  ಭಜನ-ನಮನ-ಗಾಯನ-ಸನ್ಮಾನ


ಬೆಂಗಳೂರು : ಶ್ರೀ ವ್ಯಾಸರಾಜ ಮಠ (ಸೋಸಲೆ) ಸುಬ್ರಹ್ಮಣ್ಯನಗರ ಶಾಖೆಯಲ್ಲಿ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಆದೇಶಾನುಸಾರ 'ಕಲಿಯುಗ ಕಾಮಧೇನು' ಶ್ರೀ ರಾಘವೇಂದ್ರ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 10 ರಿಂದ 12ರ ವರೆಗೆ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿದ್ದು, ಅವುಗಳ ಈ ರೀತಿ ಇವೆ :

ಪೂಜಾ ಕೈಂಕರ್ಯಗಳು : ಆರಾಧನೆಯ ಮೂರೂ ದಿನಗಳಂದು ಬೆಳಗ್ಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ,  ವಿಶೇಷ ಅಲಂಕಾರ, ಅಲಂಕಾರ ಪಂಕ್ತಿ ಸೇವಾ, ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ, ಸಂಜೆ 5-00ಕ್ಕೆ ರಥೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ.

ಭಜನಾ ಕಾರ್ಯಕ್ರಮ : (ಪ್ರತಿದಿನ ಸಂಜೆ 6 ರಿಂದ 7). ಆಗಸ್ಟ್ 10-ಸುರಭಿ ಗಾನ ಮಂಡಳಿ, ಆಗಸ್ಟ್ 11-ಜಾನ್ಹವಿ ಭಜನಾ ಮಂಡಳಿ, ಆಗಸ್ಟ್ 12-ಪವಿತ್ರ ಗಾನ ವೃಂದ.

ಸಾಂಸ್ಕೃತಿಕ ಕಾರ್ಯಕ್ರಮಗಳು : (ಪ್ರತಿದಿನ ಸಂಜೆ 7 ರಿಂದ 8-30). ಆಗಸ್ಟ್ 10-". ಹರಿದಾಸ ಮಂಜರಿ". ಶ್ರೀಮತಿ ರೂಪಶ್ರೀ ಪ್ರಭಂಜನ (ಗಾಯನ), ಶ್ರೀ  ಪಂಚಾಕ್ಷರಿ ಹಿರೇಮಠ್ (ಹಾರ್ಮೋನಿಯಂ), ಶ್ರೀ ದತ್ತಾ ಜೋಶಿ (ತಬಲಾ). 11-"ಹರಿದಾಸ ವೈಭವ". ಶ್ರೀಮತಿ ಸುಷ್ಮಾ ಶ್ರೇಯಸ್ (ಗಾಯನ), ಶ್ರೀ ಎಂ.ಎಸ್. ಗೋವಿಂದಸ್ವಾಮಿ (ಪಿಟೀಲು),  ಶ್ರೀ ಗಣೇಶ್ ಮೂರ್ತಿ (ಮೃದಂಗ). ಆಗಸ್ಟ್ 12-"ಹರಿದಾಸ ಝೇಂಕಾರ". ಶ್ರೀ ಶಿಶಿರ ಕೆ.ಪಿ. (ಗಾಯನ), ಕು|| ಸಂಸ್ಕೃತಿ ಎಸ್. ಬಾಣಾವರ್ (ಕೀ-ಬೋರ್ಡ್), ಶ್ರೀ ಧೃವ ಆಚಾರ್ಯ (ತಬಲಾ).

ಪ್ರಶಸ್ತಿ ಪ್ರದಾನ ಸಮಾರಂಭ : ಹರಿಕಥಾ ವಿದ್ವಾನ್ ಕೀರ್ತಿಶೇಷ ಸೋಸಲೆ ನಾರಾಯಣದಾಸ್ ಅವರ ಹೆಸರಿನಲ್ಲಿ ಪ್ರತಿವರ್ಷವೂ ರಾಯರ ಆರಾಧನೆಯಂದು ಸಮಾಜ ಸೇವಾ ಧುರೀಣರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವುದು ವಾಡಿಕೆ. ಅದೇ ರೀತಿ ಈ ವರ್ಷವೂ ಸಹ ಜನಪ್ರಿಯ ಶಾಸಕರೂ ಹಾಗೂ ಮಾಜಿ ಉಪಮುಖ್ಯಮಂತ್ರಿಗಳೂ ಆದ ಡಾ|| ಸಿ.ಎನ್. ಅಶ್ವತ್ಥನಾರಾಯಣ ಮತ್ತು ಜನಪ್ರಿಯ ನಗರಸಭೆ ಸದಸ್ಯರಾದ ಶ್ರೀ ಹೆಚ್. ಮಂಜುನಾಥ್ ಇವರಿಬ್ಬರಿಗೂ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುತ್ತಿದ್ದು, ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹರಿ ವಾಯು ಗುರುಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಸೋಸಲೆ ಪ್ರಕಾಶ್ ಅವರು ವಿನಂತಿಸಿದ್ದಾರೆ.

ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), #1160, 5ನೇ ಮುಖ್ಯರಸ್ತೆ, 'ಎ' ಬ್ಲಾಕ್,  ರಾಜಾಜಿನಗರ, 2ನೇ ಹಂತ ಸುಬ್ರಹ್ಮಣ್ಯನಗರ, ಬೆಂಗಳೂರು-560010


Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ