LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

*ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ದ ಅಲೆ ಇದೆ: ಬಸವರಾಜ ಬೊಮ್ಮಾಯಿ*

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವವನ್ನು ಸಂಪೂರ್ಣ ನಾಶ ಮಾಡಿದೆ. ರೈತರು, ಜನರು, ಪ್ರತಿಪಕ್ಷಗಳು ಪ್ರತಿಭಟನೆ ಮಾಡಿದರೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಇಂದು ಹಾವೇರಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾದ ವಿರೂಪಾಕ್ಷಪ್ಪ ಬಳ್ಳಾರಿಯವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ತೋರಿಸಿರುವ ಉತ್ಸಾಹದಿಂದ ಹೊಸ ಹುಮ್ಮಸ್ಸು ಬಂದಿದೆ. ನಾವೆಲ್ಲರೂ ಅಧಿಕಾರದಲ್ಲಿದ್ದಾಗಲೂ ಪಕ್ಷ ಸಂಘಟನೆ ಮಾಡಿದ್ದೇವೆ‌. ಅಧಿಕಾರ ಇಲ್ಲದಿರುವಾಗಲೂ ಹೋರಾಟ ಮಾಡಿದ್ದೇವೆ. ಈ ಭಾಗದ ಜೀವನದಿಗಳಿಗಾಗಿ ಹೋರಾಟ ಮಾಡಿದ್ದೇವೆ. ಅಧಿಕಾರಕ್ಕೆ ಬಂದಾಗ ಅವೆಲ್ಲ ಕಾರ್ಯ ಮಾಡಿದ್ದೇವೆ. ನಮ್ಮ ನಾಯಕ ಯಡಿಯೂರಪ್ಪ ಅವರು ಹೊರಾಟ ಮಾಡುವುದನ್ನು ಹೇಳಿದ್ದಾರೆ. ನಾವು ಬಡವರ ಪರ, ಜನಪರ ಸರ್ಕಾರವನ್ನು ಇಡೀ ದೇಶವೇ ಮೆಚ್ಚುಮತೆ ಮಾಡಿದ್ದೇವೆ. ನಮ್ಮ ಶಾಕಸರು ಮುಖಂಡರಿಗೆ ಕವಿ ಮಾತು ಹೇಳುತ್ತೇನೆ. ಮುಂದಿನ ಎರಡೂವರೆ ವರ್ಷದಲ್ಲಿ ಪಕ್ಷದ ಗೆಲುವಿಗೆ ಹೇಗೆ ಶ್ರಮಿಸಬೇಕು ಎಂದು ಚಿಂತನೆ ಮಾಡಬೇಕಿದೆ. ಪ್ರತಿದಿನ ಸತ್ಯಾಗ್ರಹ ಮಾಡುವಷ್ಟು ವಿಷಯ ಕಾಂಗ್ರೆಸ್ ವಿಷಯ ಕೊಡುತ್ತಿದೆ. ಐದು ವರ್ಷದ ಕೊನೆಯಲ್ಲಿ ಬರುವ ಪರಿಸ್ಥಿತಿ ಎರಡೇ ವರ್ಷದಲ್ಲಿ ರಾಜ್ಯದಲ್ಲಿ ಬಂದಿದೆ ರಾಜ್ಯದಲ್ಲಿ ಅತ್ಯಂತ ಕೆಟ್ಟ ದುಷ್ಟ ಸರ್ಕಾರ ಇದೆ. ಒಂದೂ ಕೂಡ ಜನಪರ ನಿರ್ಣಯ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ನಮ್ಮ ಕಾಲದಲ್ಲಿ ರೈತರ‌ ಮಕ್ಕಳಿಗೆ ಸಬ್ಸಿಡಿ ಕೊಡುತ್ತಿದ್ದೇವು ಅದನ್ನು ನಿಲ್ಲಿಸಿದ್ದಾರೆ. ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವು ಅದನ್ನು ನಿಲ್ಲಿಸಿದ್ದಾರೆ. ಬಡಮಕ್ಕಳಿಗೆ ವಿಶೇಷವಾಗಿ ಹೆಚ್ಚಿನ ಹಾಸ್ಟೆಲ್ ವ್ಯವಸ್ಥೆ ಮಾಡಿದ್ದೇವು ಅದನ್ನು ಕಡಿತಗೊಳಿಸಿದರು. ಪ್ರಜಾಪ್ರಭುತ್ವವನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ನಾಶ ಮಾಡಿದೆ. ರೈತರು, ಜನರು, ಪ್ರತಿಪಕ್ಷಗಳು ಪ್ರತಿಭಟನೆ ಮಾಡಿದರೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ‌. ಐವತ್ತು ವರ್ಷಗಳ ಹಿಂದೆ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ ಎಲ್ಲರ ಹಕ್ಕುಗಳನ್ನು ಮೊಟಕುಗೊಳಿಸಿದ್ದರು. ಈಗ ಅಘೋಷಿತವಾಗಿ ತುರ್ತುಪರಿಸ್ಥಿತಿ ಇದೆ. ಪೊಲಿಸ್ ಸ್ಟೇಷನ್ ಗಳು ವಸೂಲಿ ಕೇಂದ್ರಗಳಾಗಿವೆ. ಶಾಲಾ ಕಾಲೇಜುಗಳ ಪಕ್ಕದಲ್ಲಿ ಡ್ರಗ್ಸ್ ಗಾಂಜಾ ಮಾರಾಟ ಮಾಡಲಾಗುತ್ತಿದೆ. ನಮ್ಮ ಮಕ್ಕಳ ಭವಿಷ್ಯದ ಹಾಳಾಗುತ್ತಿದೆ. ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗುತ್ತಿವೆ. ಹಾನಗಲ್ ತಾಲೂಕಿನಲ್ಲಿ ಒಬ್ಬ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ಅವರನ್ನು ಬೇಲ್ ಮೇಲೆ ಬಿಡುಗಡೆ ಮಾಡಲು ಹುನ್ನಾರ ನಡೆದಿದೆ. ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಒಸಿ ಬರೆಯುವವರನ್ನು, ರೇಪ್ ಮಾಡುವವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

*ಕಾಂಗ್ರೆಸ್ ‌ಕೊಡುಗೆ ಏನು?*
ಹಾವೇರಿ ಜಿಲ್ಲೆಯಲ್ಲಿ ನಾವು 8 ನೀರಾವರಿ ಯೋಜನೆಗಳನ್ನು ಮಾಡಿದ್ದೇವೆ. ಸಿಎಂ ಇಲ್ಲಿ ಬಂದು ಯಡಿಯೂರಪ್ಪ, ಬೊಮ್ಮಾಯಿ ಕೊಡುಗೆ ಏನು ಎಂದು ಕೇಳುತ್ತಾರೆ. ನಾವು ಮಾಡಿರುವ ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿದ್ಸಾರೆ. ಹಾವೇರಿ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು ? ಮೆಡಿಕಲ್ ಕಾಲೇಜ್, ಎಂಜನೀಯರಿಂಗ್ ಕಾಲೇಜ್ , ಕೆಎಂಎಫ್ ಮೆಗಾ ಡೈರಿ, ಎಂಟು ನೀರಾವರಿ ಯೋಜನೆಗಳು ಬಿಜೆಪಿ ಅವಧಿಯಲ್ಲಿ ಆಗಿವೆ. ಯಡಿಯೂರಪ್ಪ ನಮ್ಮ ಅವಧಿಯಲ್ಲಿ ಒಂದೂವರೆ ಲಕ್ಷ ಎಕರೆ ನೀರಾವರಿಯಾಗಿದೆ ಎಂದರು.

*ಕಾಂಗ್ರೆಸ್ ವಿರುದ್ದ ಅಲೆ*
ರಾಜ್ಯದಲ್ಲಿ ಈಗ ಕಾಂಗ್ರೆಸ್ ವಿರುದ್ದ ಅಲೆ ಎದ್ದಿದೆ. ಕಾಂಗ್ರೆಸ್ ಶಾಸಕರೇ ಆರೋಪ ಮಾಡುತ್ತಿದ್ದಾರೆ. ಅವರೇ ರಾಜಿನಾಮೆ ಕೊಡುವ ಮಾತನಾಡುತ್ತಿದ್ದಾರೆ. ಸಚಿವ ಎಚ್. ಕೆ ಪಾಟೀಲರು ಸಂಪುಟದಲ್ಲಿದ್ದರೂ ಬಹಿರಂಗವಾಗಿ ಹೇಳಿದ್ದಾರೆ. ಈಗ ಸಿಎಂ ಏನು ಮಾಡುತ್ತಾರೆ ಹೇಳಬೇಕು. ಭ್ರಷ್ಟಾಚಾರದ ವಿರುದ್ದ ಪಾದಯಾತ್ರೆ ಮಾಡಿದ್ದರು. ಈಗ ಏನು ಮಾಡುತ್ತಾರೆ ಹೇಳಬೇಕು. ಕೇಂದ್ರ ಸರ್ಕಾರ ಗಣಿ ಗುತ್ತಿಗೆ ನೀಡಲು ಪಾರದರ್ಶಕತೆ ತರಲು ಕಾನೂನು ರೂಪಿಸಿದೆ. ಅದು ಜಾರಿಯಾಗುವ ಹಿಂದಿನ ದಿನ ಸಿದ್ದರಾಮಯ್ಯ ಲೈಸೆನ್ಸ್ ನವೀಕರಣ ಮಾಡಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆ. ಎಚ್.ಕೆ‌. ಪಾಟಿಲರಿಗೆ ಕಳಕಳಿ ಇದ್ದರೆ ಅದನ್ನೂ ತನಿಖೆಗೆ ಕೊಡಿ ಎಂದು ಆಗ್ರಹಿಸಿದರು.
ಬಡವರ ಬಾಳು ದುಸ್ತರವಾಗಿದೆ. ಸಾರಾಯಿ ಬೆಲೆ ಹೆಚ್ಚಳವಾಗಿದೆ. ದುಡಿಯುವ ವರ್ಗ ಕುಡಿಯುವ ಸಾರಾಯಿ ದರ ಹೆಚ್ಚಳ ಮಾಡಿದ್ದಾರೆ. ಶೇ 90 ರಷ್ಟು ಸಾರಾಯಿ ಬಡವರು ಕುಡಿಯುತ್ತಾರೆ. ಅದರ ದರವನ್ನೇ ಹೆಚ್ಚಳ ಮಾಡಿದ್ದಾರೆ. ಬಡವರ ಹೊಟ್ಟೆಗೆ ಹೊಡೆದು ಗ್ಯಾರೆಂಟಿ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರದ ಮೊತ್ತವನ್ನು ಜನರಿಂದಲೇ ಸಂಗ್ರಹಿಸಿ ಭ್ರಷ್ಟಾಚಾರ ಮಾಡುವ ವ್ಯವಸ್ಥೆ ಕಾಂಗ್ರೆಸ್ ಆರಂಭಿಸಿದೆ. ಉದಾಹರಣೆಗೆ ಎಲೆಕ್ಟ್ರಿಕ್ ಮೀಟರ್ 500ರಿಂದ 900 ರೂಪಾಯಿ ಬೀಳುತ್ತದೆ. ಆದರೆ ಇವರು ಏಳರಿಂದ ಎಂಟುಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ. ಅದರಲ್ಲಿ ಐದಾರು ಸಾವಿರ ರೂ. ದುಡ್ಡು ಹೊಡೆಯುತ್ತಿದ್ದಾರೆ. ಅದನ್ನು ಜನರಿಂದ ಸಂಗ್ರಹಿಸಿ ಮೀಟರ್ ಕಂಪನಿಯವರಿಗೆ ಕೊಟ್ಟು ದುಡ್ಡು ಹೊಡೆಯುತ್ತಿದ್ದಾರೆ. ಹಾಲಿನ ಪ್ರೋತ್ಸಾಹ ಧನ 750 ಕೋಟಿ ರೂ. ಬಾಕಿ ಕೊಡಬೇಕಿದೆ. ಸರ್ಕಾರದ ಬಳಿ ಹಣ ಇಲ್ಲ ಎಂದು ಹಾಲಿನ ದರ ಏರಿಸಿ ಜನರಿಂದ ವಸೂಲಿ ಮಾಡಿದ್ದಾರೆ. ಸ್ಟಾಂಪ್ ಪೇಪರ್ ನೋಂದಣಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಬಿಜೆಪಿ ಪ್ರತಿಪಕ್ಷವಾಗಿ ರಾಜ್ಯ ದಿವಾಳಿಯಾಗುವುದನ್ನು ತಪ್ಪಿಸಲು ಹೋರಾಟ ಮಾಡಬೇಕು ಎಂದರು.

*ಪಕ್ಷ ಸಂಘಟನೆ*
ವಿರೂಪಾಕ್ಷಪ್ಪ ಬಳ್ಳಾರಿಯವರು ಅನುಭವಿ ಇದ್ದಾರೆ. ಅರುಣ್ ಕುಮಾರ್ ಪೂಜಾರಿ ಪಕ್ಷವನ್ನು ಸಂಘಟಿಸಿದ್ದಾರೆ ಅದನ್ನು ಮುಂದುವರೆಸಿಕೊಂಡು ಎಲ್ಲರೂ ಸೇರಿ ಪಕ್ಷವನ್ನು ಸಂಘಟಿಸೋಣ. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ನಮ್ಮ ಜೊತೆಗೆ ಬಂದು ಬೆಂಬಲ ಕೊಟ್ಟಿರುವುದಕ್ಕೆ ಧನ್ಯವಾದಗಳು. ಆಶೋಕ ಅವರು ವಿಧಾನಸೌಧದಲ್ಲಿ ಸರ್ಕಾರದ ವಿರುದ್ದ ಧ್ವನಿ ಎತ್ತಲಿ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಜಿಲ್ಲಾ ತಾಲೂಕು ಪಂಚಾಯತಿ ಚುನಾವಣೆಗಳು ನಮಗೆ ವಿಧಾನಸಭೆ ಚುನಾವಣೆಗೆ ಮೆಟ್ಟಿಲು, ಬರುವ ದಿನಗಳಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಬರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.
ಈ ಸಂಧರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ, ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ.ಸಿ ಪಾಟೀಲ್, ಮಾಜಿ ಶಾಸಕರಾದ ರಾಜುಗೌಡ ನಾಯಕ ಸುರಪುರ, ಶಿವರಾಜ ಸಜ್ಜನ, ಡಿ.ಎಂ ಸಾಲಿ, ಮಾಜಿ ಶಾಸಕರು ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಪೂಜಾರ, ನೂತನ ಜಿಲ್ಲಾ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ವೀರುಪಾಕ್ಷಪ್ಪ ಬಳ್ಳಾರಿ, ಯುವ ಮುಖಂಡರಾದ ಭರತ ಬೊಮ್ಮಾಯಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಶೋಭಾ ನಿಸ್ಸಿಮಗೌಡ್ರ, ನಗರ ಸಭೆಯ ಅಧ್ಯಕ್ಷರಾದ ಶಶಿಕಲಾ ಮಾಳಗಿ, ಮುಖಂಡರುಗಳಾದ ಗವಿಸಿದ್ದಪ್ಪ ದ್ಯಾಮಣ್ಣವರ, ಡಾ. ಬಸವರಾಜ ಕೇಲಗಾರ, ಭೋಜರಾಜ ಕರೂದಿ, ಸಿದ್ದರಾಜ ಕಲಕೋಟಿ, ಮಂಜುನಾಥ ಓಲೇಕಾರ, ಸಂತೋಷಕುಮಾರ ಪಾಟೀಲ್, ಸೇರಿದಂತೆ ಹಲವಾರು ಕಾರ್ಯಕರ್ತರು, ಮುಖಂಡರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ