LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – "ಹಠವಿಲ್ಲದೆ ಸಹಕಾರ ನೀಡಿ"

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.


ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, "ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು" ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.


"ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ" ಎಂದು ಡಿಸಿಎಂ ಹೇಳಿದ್ದಾರೆ.


ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, "ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ" ಎಂದು ತಿಳಿಸಿದ್ದಾರೆ.


ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ