LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ‌ ರಸ್ತೆ ರಾಜಕಾಲುವೆ ದುರಸ್ತಿ, ಸೂಕ್ತ ನಿರ್ವಹಣೆಗಾಗಿ ಒತ್ತಾಯಿಸಿ ಪ್ರತಿಭಟನೆ

ಬ್ಯಾಟರಾಯನಪುರ : ಕ್ಷೇತ್ರದ ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ‌ ರಸ್ತೆ ರಾಜಕಾಲುವೆ ದುರಸ್ತಿ ಮತ್ತು ಸೂಕ್ತ ನಿರ್ವಹಣೆಗಾಗಿ ಒತ್ತಾಯಿಸಿ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ನೇತೃತ್ವದಲ್ಲಿ ಸೋಮವಾರ ವಿದ್ಯಾ ನಗರ ಕ್ರಾಸ್ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಎಚ್.ಸಿ.ತಮ್ಮೇಶ್ ಗೌಡ ಮಾತನಾಡಿ 'ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ ರಸ್ತೆಯಲ್ಲಿನ ರಾಜಕಾಲುವೆ ತೀರಾ ಹದಗೆಟ್ಟ ಸ್ಥಿತಿಯಲ್ಲಿದ್ದು, ಮಳೆ ನೀರು ಸಮರ್ಪಕ ರೀತಿಯಲ್ಲಿ ರಾಜಕಾಲುವೆಯಲ್ಲಿ ಹರಿಯುತ್ತಿಲ್ಲ, ರಾಜಕಾಲುವೆಯಲ್ಲಿ ಕಸ ಕಟ್ಟಿಕೊಂಡು ನೀರಿನ ಹರಿವಿಗೆ ಅಡ್ಡಿಯಾಗುತ್ತಿರುವುದರಿಂದ ಕಾಲುವೆಯಲ್ಲಿ ಹರಿಯಬೇಕಿರುವ ನೀರು ಜನವಸತಿ ಪ್ರದೇಶಗಳಲ್ಲಿ ಹರಿಯುತ್ತಿದೆ. ಮಳೆ ಬಂತೆಂದರೆ ಸಾಕು ದೊಡ್ಡ ಆವಾಂತರ ಸೃಷ್ಟಿಯಾಗಿ, ಜನಸಾಮಾನ್ಯರ ಬದುಕಿನ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಕುರಿತು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆಯ ತೀವ್ರತೆಯನ್ನು ಅರಿತು ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ವಿದ್ಯಾ ನಗರ ಕ್ರಾಸ್ ವೃತ್ತದಲ್ಲಿಂದು ಪಕ್ಷದ ಕಾರ್ಯಕರ್ತರೊಟ್ಟಿಗೆ ಪ್ರತಿಭಟನೆ ನಡೆಸುವ ಮೂಲಕ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತರಲಾಗುತ್ತಿದೆ. ಸ್ಥಳೀಯ ಶಾಸಕರು ಸಮಸ್ಯೆಗಳ ವಿರುದ್ಧ ಪ್ರತಿಭಟನೆ ಮಾಡುವವರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದು, ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವವರ ವಿರುದ್ಧ ಪೋಲೀಸರನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸದರಿ ರಾಜಕಾಲುವೆ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದರೆ ಮುಂದಿನ ಹೋರಾಟದ ದಿಕ್ಕು ತೀವ್ರವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹುಣಸಮಾರನಹಳ್ಳಿ ಪುರಸಭೆ ಸಿಇಓ ಕಾಂತರಾಜು, ಪ್ರತಿಭಟನಾಕಾರರಿಂದ ಮನವಿಪತ್ರ ಸ್ವೀಕರಿಸಿದ ನಂತರ ಮಾತನಾಡಿ 'ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ ರಸ್ತೆ ರಾಜಕಾಲುವೆ ದುರಸ್ತಿಗಾಗಿ ಅಗತ್ಯ ಕ್ರಮ ಕೈಗೊಂಡು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕಾಂತರಾಜು ಅವರ ಭರವಸೆಯ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಬ್ಯಾಟರಾಯನಪುರ ಗ್ರಾ. ಮಂಡಲ ಬಿಜೆಪಿ ಅಧ್ಯಕ್ಷ ದೊಡ್ಡಜಾಲ ಹನುಮಂತುಗೌಡ, ಪ್ರಧಾನ ಕಾರ್ಯದರ್ಶಿ ಬೇಗೂರು ಮಹೇಶ್, ಶ್ರೀಕಂಠಮೂರ್ತಿ, ತಾ.ಪಂ. ಮಾಜಿ ಸದಸ್ಯ ಬಿ.ನಾಗರಾಜ್ ಬಾಬು, ಬೆಟ್ಟಹಲಸೂರು ಗ್ರಾ.ಪಂ‌.ಮಾಜಿ‌ ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್, ಗ್ರಾ.ಮಂಡಲ ಯುವ ಮೋರ್ಚಾ ಅಧ್ಯಕ್ಷ ತಿಮ್ಮೇಗೌಡ, ಬ್ಯಾಟರಾಯನಪುರ ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಗೌಡ, ಬಿಜೆಪಿ ಮುಖಂಡರಾದ ರವಿ, ಶಾಂಭವಿ ರವಿಕುಮಾರ್, ನರೇಂದ್ರ ಬಾಬು, ಮದನ್, ಪ್ರತಾಪ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ